ಕುಶಾಲನಗರ, ನ. 17: ಸೋಮವಾರಪೇಟೆ ತಾಲೂಕಿನ ಐಗೂರಿನಲ್ಲಿ ಆರ್‍ಎಸ್‍ಎಸ್ ಮುಖಂಡನ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪ್ರಕರಣವನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕೂಡಲೆ ಬಂಧಿಸುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಯುವಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ಡಿ.ಕೆ. ಚಂದ್ರಶೇಖರ್, ನಿಡ್ಯಮಲೆ ದಿನೇಶ್, ಭಾಸ್ಕರ್ ನಾಯಕ್, ಹಿಂದೂಪರ ಸಂಘಟನೆಗಳ ಪ್ರಮುಖರಾದ ಜಿ.ಎಲ್. ನಾಗರಾಜ್, ಕೆ.ವರದ, ಲಕ್ಷ್ಮಿನಾರಾಯಣ, ಮಧು, ಅನೀಶ್, ನವನೀತ್, ಮಹೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.