ಮಡಿಕೇರಿ, ಸೆ. 20: ಕೊಡಗು ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ತಾ. 21 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಚೇಂದ್ರಿಮಾಡ ಕೆ. ನಂಜಪ್ಪ ಅವರ ಅಧ್ಯಕ್ಷತೆಯಲ್ಲಿ ವೀರಾಜಪೇಟೆಯ ಅಮರ ಜವಾನ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ನಡೆಯಲಿದೆ. ಯೋಧರ ಸ್ಮಾರಕ ಸ್ಥಂಭದ ಆವರಣದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ತುಕಡಿಯ ಗೌರವದೊಂದಿಗೆ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಅರ್ಪಿಸಿ ದೇಶ ರಕ್ಷಣೆಗಾಗಿ ಹುತಾತ್ಮರಾದ ಯೋಧರಿಗೆ ಹಾಗೂ ದಿವಂಗತ ಮಾಜಿ ಯೋಧರಿಗೆ ಶ್ರದ್ಧಾಂಜಲಿಯನ್ನು ಸಂಘದ ವತಿಯಿಂದ ಅರ್ಪಿಸಲಾಗುವದು.

ನಿವೃತ್ತ ಲೆ.ಜ. ಬಿದ್ದಂಡ ನಂದ ನಿವೃತ್ತ ಕರ್ನರಲ್ ನೆರ್ಪಂಡ ಎ. ಚಿಣ್ಣಪ್ಪ, ಶಾಸಕರಾದ ಕೆ.ಜಿ. ಬೋಪಯ್ಯ, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ವೀರಾಜಪೇಟೆ ತಾಲೂಕು ತಹಶೀಲ್ದಾರ್ ಎಂ.ಸಿ. ಮಹಾದೇವ ಸ್ವಾಮಿ, ವೀರಾಜಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೂತಂಡ ಸಚಿನ್ ಕುಟ್ಟಯ್ಯ, ವೀರಾಜಪೇಟೆ ವಿಭಾಗದ ಉಪ ಅಧೀಕ್ಷಕ ನಾಗಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.