ಮಡಿಕೇರಿ, ಡಿ. 8: ಮಡಿಕೇರಿ ಕೊಡವ ಸಮಾಜ ವತಿಯಿಂದ ತಾ. 31 ರಂದು ಹುತ್ತರಿ ಊರೋರ್ಮೆ ಬೆಳಿಗ್ಗೆ 10.30 ಗಂಟೆಗೆ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಲಿದೆ. ಸಮಾಜದ ಅಧ್ಯಕ್ಷ ಕೊಂಗಾಂಡ ಎಸ್. ದೇವಯ್ಯ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ವಕೀಲ ಪಾಲೆಕಂಡ ಎಸ್. ಸುಬ್ಬಯ್ಯ, ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಈ ಸಂದರ್ಭದಲ್ಲಿ ಹೆಚ್ಚಿನ ಅಂಕಗಳಿಸಿ ಉತ್ತೀರ್ಣರಾದ ಬಾಂಧವರ ಮಕ್ಕಳಿಗೆ ಪ್ರೋತ್ಸಾಹಕ ಬಹುಮಾನ ನೀಡಲಾಗುತ್ತದೆ