ಮಡಿಕೇರಿ, ಜೂ. 18: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಸರ್ಕಾರ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‍ಗಳಿಗೆ ಸರ್ಕಾರಿ ಕೋಟಾದಡಿ ಆಯ್ಕೆಯಾಗಲು ಬರುವ ಜುಲೈ 25 ರಂದು ನಡೆಸಲಿರುವ ನೀಟ್ 2ನೇ ಪರೀಕ್ಷೆಗೆ 3 ವಾರಗಳ ತರಬೇತಿ ನೀಡಲು ನಿರ್ಧರಿಸಲಾಗಿದೆ. ಹೊರ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವದು.

ಆಸಕ್ತರು ಆಸಕ್ತರು ತಾ. 30 ರೊಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತ ಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂ. 0821-2515944 ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.