ಕುಶಾಲನಗರ, ಜು. 7: ಅಂಗಡಿ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡುವಲ್ಲಿ ವ್ಯಾಪಾರಸ್ಥರು ಗಮನಹರಿಸಬೇಕಾಗಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯ್ತಿ ಅಧ್ಯಕ್ಷÀ ಎಂ.ಎಂ. ಚರಣ್ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿರುವ ಕನ್ನಡ ಜಾಗೃತಿ ಅಭಿಯಾನಕ್ಕೆ ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಚಾಲನೆ ನೀಡಿ ಮಾತನಾಡಿದರು. ಈ ನಿಟ್ಟಿನಲ್ಲಿ ಪರಿಷತ್ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುವದಾಗಿ ಅವರು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕಾವೇರಿ ನದಿ ಸ್ವಚ್ಛಚ್ಚತಾ ಆಂದೋಲನದ ರಾಜ್ಯ ಸಂಚಾಲಕÀ ಚಂದ್ರಮೋಹನ್ ಜಾಗೃತಿ ಅಭಿಯಾನದ ಪ್ರತಿಗಳನ್ನು ಬಿಡುಗಡೆ ಮಾಡಿದರು.

ಈ ಸಂದರ್ಭ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್‍ಸಾಗರ್, ಕುಶಾಲನಗರ ಹೋಬಳಿ ಘಟಕದ ಅಧ್ಯಕ್ಷ ರಂಗಸ್ವಾಮಿ, ಮಾಧ್ಯಮ ಕಾರ್ಯದರ್ಶಿ ಅಶ್ವಥ್ ಕುಮಾರ್, ಜಿಲ್ಲಾ ನಿರ್ದೇಶಕ ಕೆ.ಕೆ.ನಾಗರಾಜಶೆಟ್ಟಿ, ಹೋಬಳಿ ಘಟಕದ ಸಂಘಟನಾ ಕಾರ್ಯದರ್ಶಿ ಹೆಚ್.ಬಿ. ದಿನೇಶಾಚಾರಿ, ನಗರ ವರ್ತಕರ ಸಂಘದ ಕಾರ್ಯದರ್ಶಿಗಳಾದ ಅಮೃತ್ ರಾಜ್, ಉದ್ಯಮಿಗಳಾದ ಕೆ.ಎನ್.ಸುರೇಶ್, ಗೋಪಾಲಕೃಷ್ಣ ಮತ್ತಿತರರು ಇದ್ದರು.