ಕುಶಾಲನಗರ, ಫೆ 01: ಕುಶಾಲನಗರವನ್ನು ಪಟ್ಟಣ ಪಂಚಾಯಿತಿಯನ್ನು ನಗರಸಭೆ ಯನ್ನಾಗಿ ಮೇಲ್ದರ್ಜೆಗೆ ಏರಿಸುವ ಸಂಬಂಧ ಪ್ರಯತ್ನಗಳು ಮುಂದುವರೆದಿದೆ ಎಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ತಿಳಿಸಿದರು. ಅವರು ಕುಶಾಲನಗರ ಯೋಜನಾ ಪ್ರಾಧಿಕಾರ ಕಚೇರಿಗೆ ಭೇಟಿ ನೀಡಿ ನೂತನ ಅಧ್ಯಕ್ಷ ಬಿ.ಜಿ. ಮಂಜುನಾಥ್ ಗುಂಡೂರಾವ್ ಅವರನ್ನು ನದಿ ಸ್ವಚ್ಛತೆ ಕಾಪಾಡುವ ಹಿನ್ನೆಲೆಯಲ್ಲಿ ಜಿಲ್ಲೆಯ ವ್ಯಾಪ್ತಿಯ ಕಾವೇರಿ ನದಿ ತಟದಲ್ಲಿ ವಾಸವಾಗಿರುವ ಜನರನ್ನು ಶಾಶ್ವತವಾಗಿ ಸ್ಥಳಾಂತರಿಸುವದರೊಂದಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸರಕಾರದೊಂದಿಗೆ ಚರ್ಚಿಸಿ ಕ್ರಮಕ್ಕೆ ಮುಂದಾಗುವದಾಗಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಪ್ರತಿಕ್ರಿಯಿಸಿದ್ದಾರೆ.ಅವರು ಕುಶಾಲನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ನಾಪೋಕ್ಲು ವ್ಯಾಪ್ತಿಯಲ್ಲಿ ಹರಡುತ್ತಿರುವ ಜಾಂಡಿಸ್ ನಿಯಂತ್ರಣಕ್ಕೆ ಈಗಾಗಲೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಚಿಕಿತ್ಸೆ ಒದಗಿಸಲು ಸೂಚಿಸಲಾಗಿದೆ. ಕಲುಷಿತ ನದಿ ನೀರು ಬಳಕೆ ಕೂಡ ಖಾಯಿಲೆಗೆ ಕಾರಣ ಎಂದು ತಿಳಿದು ಬಂದಿದ್ದು ನದಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ಮುಂದಾದಲ್ಲಿ ಮಾತ್ರ ಇದರ ನಿಯಂತ್ರಣ ಸಾಧ್ಯ ಎಂದರು. ನದಿ ತಟದಲ್ಲಿ ವಾಸಿಸುವ ಜನರಿಂದ ನದಿಗಳಿಗೆ ನೇರವಾಗಿ ತ್ಯಾಜ್ಯಗಳು ಸೇರ್ಪಡೆಗೊಳ್ಳುತ್ತಿವೆ. ಈ ಮೂಲಕ ಕಲುಷಿತಗೊಳ್ಳುವ ನೀರಿನ ಬಳಕೆಯಿಂದ ಸಾಂಕ್ರಾಮಿಕ ರೋಗಗಳು ಹಬ್ಬಲು ಕಾರಣವಾಗುತ್ತಿದೆ ಎಂದರು.