ನಾಪೆÇೀಕ್ಲು, ಫೆ.2: ಧರ್ಮದ ನೆಲೆಗಟ್ಟಿನಲ್ಲಿ ದೇವಸ್ಥಾನಗಳು ಅಭಿವೃದ್ಧಿಗೊಂಡಾಗ, ಗ್ರಾಮ, ದೇಶ ಅಭಿವೃದ್ಧಿಗೊಳ್ಳುತ್ತದೆ. ಭಕ್ತ ಮತ್ತು ದೇವರ ನಡುವೆ ಅಂತರಗಳಿಲ್ಲ. ಭಕ್ತಿ, ಶ್ರದ್ಧೆಯಿಂದ ಮಾತ್ರ ಭಗವಂತನನ್ನು ಒಲಿಸಿಕೊಳ್ಳಬಹುದು. ಜತೆಯಲ್ಲಿ ಅರಿವಿನ ಮೂಲಕ ಜ್ಞಾನ ಸಂಪಾದನೆ ಮಾಡಿ ಅದರ ಮೂಲಕ ಸಮಾಜ, ಧಾರ್ಮಿಕತೆಯನ್ನು ಎತ್ತಿಹಿಡಿಯಬಹುದು ಎಂದು ಸಾಹಿತಿ, ಶಿಕ್ಷಣ ತಜ್ಞ ಪ್ರೊ.ಕೆ.ಈ.ರಾಧಾಕೃಷ್ಣ ಹೇಳಿದರು.

ಅವರು ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನವೀಕರಣ ಪುನರ್‍ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ಐದನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು.

ಅಧ್ಯಕ್ಷತೆಯನ್ನು ದೇವಳದ ಆಡಳಿತ ಮೊಕ್ತೇಸರ ನಾಗೇಶ್ ಕುಂದಲ್ಪಾಡಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್, ಸುಳ್ಯ ಉಪ ಅರಣ್ಯ ಅಧಿಕಾರಿ ಪ್ರಶಾಂತ್ ಪೈ, ಸುದ್ದಿ ಸಮೂಹ ಸಂಸ್ಥೆ ಮುಖ್ಯಸ್ಥ ಡಾ| ಯು.ಪಿ. ಶಿವಾನಂದ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಗಿರೀಜಾ ಶಂಕರ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಪುರುಷೋತ್ತಮ ಬಂಗಾರಕೋಡಿ ಭಾಗವಹಿಸಿದ್ದರು. ದೇವತಕ್ಕರು ರಾಜಗೋಪಾಲ ರಾಮಕಜೆ, ಆಡಳಿತ ಕಾರ್ಯದರ್ಶಿ ವಿಶ್ವನಾಥ ಕುಂಬಳಚೇರಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಆರ್.ಡಿ. ಆನಂದ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ನಿಡ್ಯಮಲೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರವೀಣ್ ಬಂಗಾರಕೋಡಿ, ಆರ್ಥಿಕ ಸಮಿತಿ ಅಧ್ಯಕ್ಷ ಜ್ಞಾನೇಶ್ ಎನ್.ಎ, ಕಾರ್ಯದರ್ಶಿ ತೇಜಪ್ರಸಾದ್ ಎ.ಎಸ್, ಕೋಶಾಧಿಕಾರಿ ಹರಿಶ್ಚಂದ್ರ ಮುಡ್ಕಜೆ, ದೇವತಕ್ಕ ಮುಖ್ಯಸ್ಥರು ಮೊದಲಾದವರು ಉಪಸ್ಥಿತರಿದ್ದರು. ಸಭಾಕಾರ್ಯಕ್ರಮ ಸಮಿತಿಯ ಸಂಚಾಲಕ ಪುರುಷೋತ್ತಮ ಕಿರ್ಲಾಯ ಸ್ವಾಗತಿಸಿ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ತಿಲೋತ್ತಮ ಅಡ್ಕ ವಂದಿಸಿದರು. ಉಪನ್ಯಾಸಕ ಪ್ರಸನ್ನ ನಿಡ್ಯಮಲೆ ಹಾಗೂ ಮನೋಜ್ ನಿಡ್ಯಮಲೆ, ಶಿಕ್ಷಕಿ ರೇಖಾ ಅಡ್ಕ ಕಾರ್ಯಕ್ರಮ ನಿರೂಪಿಸಿದರು. ರಾತ್ರಿ ಯಕ್ಷಸಂಗೀತ ನಾದ ವೈಭವಂ ಉಡುಪಿ ಇವರಿಂದ ಯಕ್ಷಗಾನ ರೂಪಕ ನಡೆಯಿತು.