ಗೋಣಿಕೊಪ್ಪಲು, ಮಾ. 1: ಅಮ್ಮತ್ತಿ- ವೀರಾಜಪೇಟೆ ರಸ್ತೆಯಲ್ಲಿ ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಅಪರಿಚಿತ ಪಾದಾಚಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಗೆ ಸುಮಾರು 50 ವರ್ಷ ಪ್ರಾಯ ವಿರಬಹುದೆಂದು ಅಂದಾಜಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮಂಗಳವಾರ ತಡರಾತ್ರಿ ಅಮ್ಮತ್ತಿಯ ಮಸೀದಿ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ತಲೆ ಹಾಗೂ ಎದೆಯ ಭಾಗಕ್ಕೆ ಗಂಭಿರ ಗಾಯಗೊಂಡಿದ್ದ ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ವಾರಸುದಾರರಿದ್ದಲ್ಲಿ ಸಂಬಂಧಿಕರು ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ.