ಗೋಣಿಕೊಪ್ಪಲು, ಮಾ. 1: ದಕ್ಷಿಣ ಕೊಡಗಿನ ಎರಡು ಗ್ರಾಮಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬಾಳೆಲೆಯ ಸತೀಶ್ ಎಂಬವರ ತಾಳೆ ತೋಟಕ್ಕೆ ಬೆಂಕಿ ಬಿದ್ದು, ಸಣ್ಣ ಪ್ರಮಾಣದ ನಷ್ಟ ಉಂಟಾಗಿದೆ. ಬೆಂಕಿ ಬಿದ್ದಿರುವ ಜಾಗಕ್ಕೆ ಅಗಿಶಾಮಕ ದಳದ ವಾಹನ ತೆರಳಲು ಸಾಧ್ಯವಾಗದ ಕಾರಣ ಸ್ಥಳೀಯರ ಸಹಾಯದಿಂದ ನಂದಿಸಲಾಗಿದೆ.

ಕುಂದ ಬೆಟ್ಟದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಟ್ಟದಲ್ಲಿ ಅಗ್ನಿಶಾಮಕ ದಳದ ವಾಹನ ತೆರಳಲು ಆಗದ ಕಾರಣ ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ಮುಂದುವರಿಸಿದ್ದಾರೆ. ಒಂದಷ್ಟು ಕಾಡು ಬೆಂಕಿಗೆ ಆಹುತಿಯಾಗಿದೆ.