ಮಡಿಕೇರಿ, ಮಾ. 3: ಸುಂಟಿಕೊಪ್ಪ ಸಮೀಪದ ಉಲುಗುಲಿ ಗ್ರಾಮದ ಹರೀಶ್ ಎಂಬಾತ ತನ್ನ ಸಹೋದರ ಆನಂದ ಎಂಬವರನ್ನು ಕೊಲೆ ಮಾಡಿದ್ದ ಪ್ರಕರಣ ಸಂಬಂಧ, ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆಯೊಂದಿಗೆ ದಂಡ ವಿಧಿಸಿದೆ.ಕೊಲೆ ಪ್ರಕರಣ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ಸಂದರ್ಭ, ವಾದವನ್ನು ಆಲಿಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿ ಅವರು, ಆರೋಪಿಗೆ ಜೀವಾವಧಿ ಶಿಕ್ಷೆಯೊಂದಿಗೆ ರೂ. 20 ಸಾವಿರ ದಂಡ ವಿಧಿಸಿದ್ದಾರೆ. ಅಲ್ಲದೆ ಮೃತರ ಪತ್ನಿ ಶೋಭಾ ಎಂಬಾಕೆಗೂ ಕೊಲೆ ಆರೋಪಿ ಹರೀಶ್ ಜೀವ ಬೆದರಿಕೆ ಹಾಕಿದ್ದಕ್ಕಾಗಿ ರೂ. 3 ಸಾವಿರ ದಂಡ ಸಹಿತ 4 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರಕಾರಿ ಅಭಿಯೋಜಕ ಎ.ಪಿ. ಫಿರೋಜ್‍ಖಾನ್ ವಾದ ಮಂಡಿಸಿದ್ದರು.