ಸೋಮವಾರಪೇಟೆ, ಮಾ. 5: ಸಮೀಪದ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಎಂ.ಎ. ನಿಶಾಂತ್ ಅಂಗವಿಕಲರ ವಿಭಾಗದ 100 ಮೀ. ಓಟದ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ದೊಡ್ಡಬಳ್ಳಾಪುರ ತಾಲೂಕು ಕನಸವಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ 14 ರಿಂದ 17 ವರ್ಷ ವಯೋಮಾನದ ಅಂಗವಿಕಲರ 6ನೇ ರಾಜ್ಯ ಮಟ್ಟದ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ಈತ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.