ಮಡಿಕೇರಿ, ಮಾ. 5: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವತಿಯಿಂದ ಇದೇ ಪ್ರಥಮ ಬಾರಿಗೆ ಮಹಿಳೆಯರಿಗಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಮಹಿಳೆಯರು ಸಂಭ್ರಮದಿಂದ ಭಾಗಿಗಳಾಗಿದ್ದರು. 18 ರಿಂದ 60 ವರ್ಷದೊಳಗಿನ ಸರಕಾರಿ ನೌಕರರು, ಮಹಿಳೆಯರು, ಜನಪ್ರತಿನಿಧಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಸ್ತ್ರೀಶಕ್ತಿ ಸಂಘದ ಸದಸ್ಯರು, ಹೊರಗುತ್ತಿಗೆ ಸಿಬ್ಬಂದಿಗಳು, ಸ್ವಯಂ ಸೇವಾ ಸಿಬ್ಬಂದಿಗಳನ್ನು ಒಳಗೊಂಡಂತೆ ಕ್ರೀಡಾಕೂಟ ನಡೆಯಿತು.

ತಾಲೂಕುಮಟ್ಟದ ಈ ಕ್ರೀಡಾಕೂಟದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು, ಮನರಂಜನಾ ಸ್ಪರ್ಧೆಗಳು ಗಮನ ಸೆಳೆದವು.

ಈ ಸಂದರ್ಭ ನಡೆದ ಕಾರ್ಯಕ್ರಮವನ್ನು ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ. ಅಧ್ಯಕ್ಷೆ ತೆಕ್ಕೆಡ ಶೋಭಾ ಮೋಹನ್ ವಹಿಸಿದ್ದರು. ಅತಿಥಿಗಳಾಗಿ ತಾ.ಪಂ. ಸದಸ್ಯೆ ಉಮಾಪ್ರಭು, ಕೊಡಗು ಸೌಹಾರ್ದ ಸಂಘದ ಅಂಜಪರವಂಡ ಉಷಾ ಉತ್ತಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಮಮ್ತಾಜ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತ ಪಾಲ್ಗೊಂಡಿದ್ದರು.

ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಹಾಗೂ ಉಷಾ ಉತ್ತಯ್ಯ 100 ಮೀಟರ್ ಓಟದ ಮೂಲಕ ಕ್ರೀಡಾ ಸ್ಪರ್ಧೆಗೆ ಚಾಲನೆ ನೀಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ದಮಯಂತಿ ಸ್ವಾಗತಿಸಿ, ನಿರೂಪಿಸಿದರು.

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತ ಕೀರ್ತನ್ ವಂದಿಸಿದರು. ತೀರ್ಪುಗಾರರಾಗಿ ಕೃಷ್ಣ, ರಮೇಶ್, ನಾಗರಾಜ್, ವೀಣಾ, ಶ್ರೀನಿವಾಸ್, ಸಂದೇಶ್, ಅನಿಲ್ ಕಾರ್ಯನಿರ್ವಹಿಸಿದರು.