ಸೋಮವಾರಪೇಟೆ, ಮಾ. 9: ಸಮೀಪದ ಗೌಡಳ್ಳಿಯ ಹಿಂದೂ ಗೆಳೆಯರ ಬಳಗದ ವತಿಯಿಂದ ಯುಗಾದಿ ಪ್ರಯುಕ್ತ ತಾ. 28 ಮತ್ತು 29 ರಂದು ಅಂತರ್ ರಾಜ್ಯಮಟ್ಟದ ಮುಕ್ತ ಫುಟ್ಬಾಲ್ ಪಂದ್ಯಾಟ ನಡೆಯಲಿದೆ ಎಂದು ಬಳಗದ ಅಧ್ಯಕ್ಷ ಎಸ್.ಎನ್. ಪೃಥ್ವಿ ತಿಳಿಸಿದ್ದಾರೆ.

ಇಲ್ಲಿನ ಪತ್ರಿಕಾಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌಡಳ್ಳಿಯ ಬಿಜಿಎಸ್ ಶಾಲಾ ಮೈದಾನದಲ್ಲಿ ಪಂದ್ಯಾಟ ನಡೆಯಲಿದೆ. ಪ್ರಥಮ ಬಹುಮಾನ ರೂ. 1 ಲಕ್ಷ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ರೂ. 50 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುವದು, ಅಲ್ಲದೆ ವೈಯುಕ್ತಿಕ ಬಹುಮಾನ ನೀಡಲಾಗುವದು ಎಂದರು.

ಆಸಕ್ತ ತಂಡಗಳು ತಾ. 26 ರೊಳಗೆ ತಮ್ಮ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಪಂದ್ಯಾಟಕ್ಕೆ ಸಮವಸ್ತ್ರ ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗಾಗಿ 9448106172, 9481057522 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದರು. ಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಜಿ.ಎನ್. ವಿಜಯ್, ಜಿ.ಆರ್. ಕೇಶವ, ಹೆಚ್.ಆರ್. ದರ್ಶನ್ ಉಪಸ್ಥಿತರಿದ್ದರು.