ಮಡಿಕೇರಿ, ಮಾ. 9: ಮಡಿಕೇರಿಯ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕೆಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಸಹಿತ ಜನಪ್ರತಿನಿಧಿಗಳೊಂದಿಗೆ ಇಂದು ಕೂಟುಹೊಳೆ ಹಾಗೂ ಕುಂಡಾಮೇಸ್ತ್ರಿ ಯೋಜನೆಯ ಸ್ಥಿತಿಗತಿಯನ್ನು ಖುದ್ದು ಪರಿಶೀಲಿಸಿದ ಅವರು, ಮಾಧ್ಯಮದೊಂದಿಗೆ ಮಾತನಾಡುತ್ತಾ, ಸ್ಥಳದಲ್ಲಿದ್ದ ನಗರಸಭಾ ಆಯುಕ್ತೆ ಶುಭ ಹಾಗೂ ಇತರ ಅಧಿಕಾರಿಗಳಿಗೆ ಸಮರ್ಪಕ ನೀರು ಪೂರೈಕೆಯತ್ತ ಗಮನಹರಿಸಲು ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸೆÀ್ಯ ವೀಣಾಅಚ್ಚಯ್ಯ, ನಗರಸಭೆ ಅಧ್ಯಕೆÀ್ಷ ಕಾವೇರಮ್ಮ ಸೋಮಣ್ಣ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚುಮ್ಮಿದೇವಯ್ಯ, ಸದಸ್ಯರಾದ ಎಚ್.ಎಂ. ನಂದಕುಮಾರ್, ಮನ್ಸೂರ್, ಟಿ.ಹೆಚ್. ಉದಯಕುಮಾರ್, ಜುಲೇಕಾಬಿ, ಲೀಲಾ ಶೇಷಮ್ಮ, ಪ್ರಕಾಶ್ ಆಚಾರ್ಯ, ಪೀಟರ್, ತಜಸ್ಸುಂ, ಪೌರಾಯುಕೆÀ್ತ ಬಿ.ಶು¨s, ತೆನ್ನೀರ ಮೈನಾ ಮತ್ತಿತರರು ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಕೂಟುಹೊಳೆ ಹಾಗೂ ಕುಂಡಾಮೇಸ್ತ್ರಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

(ಮೊದಲ ಪುಟದಿಂದ) ಕೂಟುಹೊಳೆಯ ಹಿನ್ನೀರಿನ 1 ಕಿ.ಮೀ. ಉದ್ದ ವ್ಯಾಪ್ತಿಯ 45 ಎಕರೆ ಪ್ರದೇಶದಲ್ಲಿ ಹೂಳು ತೆಗೆಯುವ ಕಾರ್ಯ ಈಗಾಗಲೇ ಆರಂಭ ಗೊಂಡಿದ್ದು, ಈ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.

ಈ ವೇಳೆ ವೀಣಾಅಚ್ಚಯ್ಯ ಅವರು ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುಡಿಯುವ ನೀರು ಯೋಜನೆಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ. ಕುಂಡಾಮೇಸ್ತ್ರಿ ಯೋಜನೆಗಾಗಿಯೇ 30 ಕೋಟಿ ರೂ ನಿಗದಿಪಡಿಸಲಾಗಿದೆ. ಕುಂಡಾಮೇಸ್ತ್ರಿಯಲ್ಲಿ ಚೆಕ್‍ಡ್ಯಾಂ ನಿರ್ಮಾಣ ಕಾಮಗಾರಿ ಆರಂಭಿಸಬೇಕಿದೆ ಎಂದು ಅವರು ತಿಳಿಸಿದರು.

ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಸನ್ನ ಕುಮಾರ್ ಅವರು ಕೂಟುಹೊಳೆ ಹಿನ್ನೀರು ಪ್ರದೇಶದಲ್ಲಿ ಹೂಳು ತೆಗೆಯುವ ಕಾರ್ಯವು ಸುಮಾರು 1.42 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿದೆ. ಹೆಚ್ಚುವರಿ ನೀರು ಸಂಗ್ರಹಣೆಗೆ ಹೂಳು ತೆಗೆಯುವ ಕಾರ್ಯ ನಡೆಯುತ್ತಿದೆ. ಕಾಮಗಾರಿ ಶೀಘ್ರ ಪೂರ್ಣ ಗೊಳಿಸಲಾಗುವದು ಎಂದು ಮಾಹಿತಿ ನೀಡಿದರು.