ಸೋಮವಾರಪೇಟೆ, ಮಾ. 9: ಸಮೀಪದ ಶಾಂತಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ಅಧ್ಯಕ್ಷ ಬಿ.ಪಿ. ಅನಿಲ್‍ಕುಮಾರ್ ಅಧ್ಯಕ್ಷತೆಯಲ್ಲಿ ಅಲ್ಲಿನ ಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ತಾ. 14 ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಸದಸ್ಯ ಧರ್ಮಪ್ಪ, ನೋಡಲ್ ಅಧಿಕಾರಿಯಾಗಿ ಅಕ್ಷರ ದಾಸೋಹ ಅಧಿಕಾರಿ ಹೇಮಂತ್‍ಕುಮಾರ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ.

ಗಣಗೂರು ಗ್ರಾಮ ಸಭೆ: ಗಣಗೂರು ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ತಾ. 14 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾ.ಪಂ. ಅಧ್ಯಕ್ಷೆ ಸವಿತ ಅವರ ಅಧ್ಯಕ್ಷತೆಯಲ್ಲಿ ಗೋಣಿಮರೂರು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ತಾ.ಪಂ. ಸದಸ್ಯೆ ಸವಿತ, ಮೀನುಗಾರಿಕಾ ಇಲಾಖೆಯ ನಿರ್ದೇಶಕಿ ಮಿಲನಾ ಭರತ್ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಲಿದ್ದಾರೆ.