ಮಡಿಕೇರಿ, ಮಾ. 11: ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರನ್ನಾಗಿ ಎ. ಜೋಸೆಫ್ ವಿನ್ಸೆಂಟ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಡಿಕೇರಿ ಸಮಿತಿ ಅಧ್ಯಕ್ಷ ಕೆ.ಇ. ಮ್ಯಾಥ್ಯೂ ನೇಮಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರ ಸೂಚನೆಯಂತೆ ಜಿಲ್ಲಾಧ್ಯಕ್ಷರು ಎ. ಜೋಸೆಫ್ ವಿನ್ಸೆಂಟ್ ಅವರನ್ನು ನೇಮಿಸಿದ್ದಾರೆ.