ಮಡಿಕೇರಿ, ಮಾ. 19: ಡಾ.ಕಸ್ತೂರಿರಂಗನ್ ವರದಿ ಸೇರಿದಂತೆ ಕೊಡಗಿಗೆ ಮಾರಕವಾಗಬಹುದಾದ ವಿವಾದಿತ ಯೋಜನೆಗಳು ಎದುರಾದಾಗಲೆಲ್ಲಾ ಸುಳ್ಳು ಭರವಸೆಗಳನ್ನೇ ನೀಡುತ್ತಾ ಬಂದಿರುವ ಬಿಜೆಪಿ ನಿರಂತರವಾಗಿ ಜಿಲ್ಲೆಯ ಜನತೆಯನ್ನು ವಂಚಿಸುತ್ತಾ ಬಂದಿದೆ ಎಂದು ಸಿಪಿಐಎಂನ ಜಿಲ್ಲಾ ಕಾರ್ಯದರ್ಶಿ ಡಾ. ಇ.ರಾ. ದುರ್ಗಾಪ್ರಸಾದ್ ಆರೋಪಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೂಕ್ಷ್ಮ ಪರಿಸರ ವಲಯದ ವಿಚಾರದಲ್ಲಿ ಬಿಜೆಪಿ ಮುಖಂಡರು ಕರ್ನಾಟಕ ಸರಕಾರದ ವಿರುದ್ಧ ಆರೋಪ ಮಾಡುವ ಮೊದಲು ಕೇಂದ್ರದಲ್ಲಿ ಅಧಿಕಾರದಲ್ಲಿರುವ ತಮ್ಮ ನೇತೃತ್ವದ ಸರಕಾರ ಜನಪರವಾಗಿ ಯಾವ ನಿರ್ಧಾರ ಕೈಗೊಂಡಿದೆ ಎನ್ನುವದನ್ನು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.

ಸೂಕ್ಷ್ಮ ಪರಿಸರ ವಲಯದ ವಿವಾದಕ್ಕೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಆಕ್ಷೇಪಣಾ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿಲ್ಲವೆಂದು

ಜಿಲ್ಲೆಯನ್ನು ಪ್ರತಿನಿಧಿಸುವ ಸಂಸದರು ಸೇರಿದಂತೆ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಆ ಪಕ್ಷದ ಸಂಸದರು ಕೇಂದ್ರದಲ್ಲಿ ಅಧಿಕಾರದಲ್ಲಿರುವ ತಮ್ಮದೇ ಸರಕಾರದ ಮೇಲೆ ಒತ್ತಡ ಹೇರಿ ಯಾವ ರೀತಿಯಲ್ಲಿ ಜನಪರ ಕಾಳಜಿ ತೋರಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಡಾ.ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರೂ ಆದ ಎಂ.ಪಿ. ಅಪ್ಪಚ್ಚು ರಂಜನ್ ಮತ್ತು ವಿರಾಜಪೇಟೆ ಶಾಸಕರಾದ ಕೆ.ಜಿ.ಬೋಪಯ್ಯ ಅವರುಗಳು, ರಾಜ್ಯ ಸರಕಾರ ಮಂಡಿಸಿದ ಅಭಿಪ್ರಾಯ ಸರಿಯಿಲ್ಲ, ಸಮಿತಿಯ ಮೂಲಕವೇ 10 ಸಾವಿರಕ್ಕೂ ಅಧಿಕ ಆಕ್ಷೇಪಣಾ ಪತ್ರಗಳನ್ನು ಕೇಂದ್ರಕ್ಕೆ ಕಳುಹಿಸಲಾಗುವದೆಂದು ಈ ಹಿಂದೆ ಭರವಸೆ ನೀಡಿದ್ದರು. ಇವರುಗಳು ಭರವಸೆಯಂತೆ ನಡೆದುಕೊಂಡಿದ್ದರೆ ಮತ್ತು ಕೇಂದ್ರದ ಮೇಲೆ ಒತ್ತಡ ಹೇರಿದ್ದರೆ ಇದೇ ಫೆಬ್ರವರಿ ತಿಂಗಳಿನಲ್ಲಿ ಮತ್ತೆ ಸೂಕ್ಷ್ಮ ಪರಿಸರ ವಲಯದ ಕುರಿತು ಮತ್ತೊಂದು ಕರಡು ಅಧಿಸೂಚನೆಯನ್ನು ಕೇಂದ್ರ ಸರಕಾರ ಹೇಗೆ ಹೊರಡಿಸಿತು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆಯ ಸಂದರ್ಭ ಜಿಲ್ಲಾ ಬಿಜೆಪಿಯ ಕೇಂದ್ರದಲ್ಲಿ ಎನ್‍ಡಿಎ ಸರಕಾರ ಅಧಿಕಾರಕ್ಕೆ ಬಂದರೆ ಸೂಕ್ಷ್ಮ ಪರಿಸರ ವಲಯದ ವಿವಾದ ಬಗೆ ಹರಿಯಲಿದೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದು ಇಷ್ಟು ವರ್ಷವಾದರೂ ಜನಪರ ಕಾಳಜಿ ತೋರದೆ ಮತ್ತೆ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, ಇದು ಬಿಜೆಪಿಯ ಹುಸಿ ಭರವಸೆಗಳಿಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.

ರಾಜ್ಯದ ಬಿಜೆಪಿ ಸಂಸದರು ಒಗ್ಗೂಡಿ ಕೇಂದ್ರದ ಮೇಲೆ ಒತ್ತಡ ಹೇರದ ಹೊರತು ಸೂಕ್ಷ್ಮ ಪರಿಸರ ವಲಯದ ವಿವಾದವನ್ನು ಬಗೆಹರಿಸಲು ಸಾಧ್ಯವಿಲ್ಲವೆಂದು ಅವರು ಅಭಿಪ್ರಾಯಪಟ್ಟರು.

(ಮೊದಲ ಪುಟದಿಂದ) ರಾಜ್ಯದ ಬಿಜೆಪಿ ನಾಯಕರು ಆರೋಪಿಸುತ್ತಿ ದ್ದಾರೆ. ಆದರೆ ಅರಣ್ಯ ಸಚಿವ ರಮಾನಾಥ ರೈ ಅವರು ವರದಿ ಸಲ್ಲಿಸಿರುವ ಬಗ್ಗೆ ದಾಖಲೆಗಳಿದ್ದು, ರಾಜ್ಯ ಸರಕಾರ ತನ್ನ ಜವಬ್ದಾರಿ ಯನ್ನು ನಿಭಾಯಿಸಿರುವದಕ್ಕೆ ಸಾಕ್ಷ್ಯಗಳಿವೆ. ಬಿಜೆಪಿ ತನ್ನ ಜವಬ್ದಾರಿ ಯಿಂದ ನುಣುಚಿಕೊಳ್ಳುವದಕ್ಕಾಗಿ ರಾಜ್ಯ ಸರಕಾರವನ್ನು ಟೀಕಿಸುತ್ತಿದೆ ಎಂದು ಡಾ.ದುರ್ಗಾಪ್ರಸಾದ್ ಆರೋಪಿಸಿದರು. ಜಿಲ್ಲೆಯನ್ನು ಪ್ರತಿನಿಧಿಸುವ ಸಂಸದರು ಸೇರಿದಂತೆ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಆ ಪಕ್ಷದ ಸಂಸದರು ಕೇಂದ್ರದಲ್ಲಿ ಅಧಿಕಾರದಲ್ಲಿರುವ ತಮ್ಮದೇ ಸರಕಾರದ ಮೇಲೆ ಒತ್ತಡ ಹೇರಿ ಯಾವ ರೀತಿಯಲ್ಲಿ ಜನಪರ ಕಾಳಜಿ ತೋರಿದ್ದಾರೆ ಎಂದು ಅವರು ಪ್ರಶ್ನಿಸಿದರು.