ಮಡಿಕೇರಿ, ಮಾ. 20: ವಾಲ್ನೂರು - ತ್ಯಾಗತ್ತೂರು ಗ್ರಾಮದ ಶ್ರೀ ಭಗವತಿ ದೇವಿಯ ವಾರ್ಷಿಕ ಉತ್ಸವ ತಾ. 24 ರಿಂದ 27ರವರೆಗೆ ನಡೆಯಲಿದೆ. ತಾ. 24 ರಂದು ಸಂಜೆ ಪಕ್ಕದ ಮನೆಯಿಂದ ಭಂಡಾರ ಇಳಿಸುವದು, ದೇವಿ ಬಲಿ, ಮಹಾಪೂಜೆ, ತೀರ್ಥಪ್ರಸಾದ, ತಾ. 25 ರಂದು ಮಧ್ಯಾಹ್ನ 3 ಗಂಟೆಯಿಂದ ಪಟ್ಟಣಿ, ಎತ್ತು ಹೋರಾಟ, ದೇವಿ ಬಲಿ, ಅಲಂಕಾರ ಪೂಜೆ, ತೀರ್ಥ ಪ್ರಸಾದ, ಅನ್ನಸಂತರ್ಪಣೆ, ತಾ. 26 ರಂದು ಮಧ್ಯಾಹ್ನ 3 ಗಂಟೆಯಿಂದ ತೆಂಗಿನ ಕಾಯಿಗೆ ಗುಂಡು ಹೊಡೆಯುವದು, ದೇವಿ ಬಲಿ, ಅವಭೃತ ಸ್ನಾನ, ಬಲಿನೃತ್ಯ, ಅಲಂಕಾರ ಪೂಜೆ, ಮಹಾಪೂಜೆ, ತೀರ್ಥ ಪ್ರಸಾದ, ಅನ್ನಸಂತರ್ಪಣೆ ನಡೆಯಲಿದೆ. ತಾ. 27 ರಂದು ಬೆಳಿಗ್ಗೆ 9 ಗಂಟೆಯಿಂದ ಶುದ್ಧಕಲಶ, ಮಹಾಪೂಜೆ, ತೀರ್ಥ ಪ್ರಸಾದ, ಅನ್ನಸಂತರ್ಪಣೆ ನಡೆಯಲಿದೆ ಎಂದು ತಕ್ಕಮುಖ್ಯಸ್ಥರು, ಆಡಳಿತ ಮಂಡಳಿಯವರು ತಿಳಿಸಿದ್ದಾರೆ.