ಮಡಿಕೇರಿ, ಮಾ.20: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ, ಮಾದಾಪುರ ಮತ್ತು ನಂಜರಾಯ ಪಟ್ಟಣಗಳಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ಉದ್ಘಾಟಿಸಿದರು.
ಸುಮಾರು 112 ಲಕ್ಷ ರೂ. ವೆಚ್ಚದಲ್ಲಿ ಮೂರು ಕಡೆ ನಿರ್ಮಾಣ ಮಾಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವರು ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಿದೆ. ಆ ನಿಟ್ಟಿನಲ್ಲಿ ಎಲ್ಲರಿಗೂ ಶಿಕ್ಷಣ ನೀಡುವದರ ಜೊತೆಗೆ ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.
ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿಯೇ ಆರೋಗ್ಯ ಸೇವೆ ಒದಗಿಸಬೇಕು ಎಂಬ ಉದ್ದೇಶದಿಂದ ಸುಸಜ್ಜಿತ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ. ತಜ್ಞ ವೈದ್ಯರು ಗ್ರಾಮೀಣ ಸೇವೆ ಸಲ್ಲಿಸಲು ಬರಬೇಕು. ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು ಎಂಬ ಉದ್ದೇಶದಿಂದ ಹಲವು ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಜಿ.ಪಂ.ಸದಸ್ಯರಾದ ಪುಟ್ಟರಾಜು, ಕುಮುದಾ ಧರ್ಮಪ್ಪ, ಸೋಮವಾರಪೇಟೆ ತಾ.ಪಂ. ಅಧ್ಯಕೆÀ್ಷ ಪುಷ್ಪ ರಾಜೇಶ್, ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಇತರರು ಇದ್ದರು.