ಮಡಿಕೇರಿ, ಮಾ. 20: ಕಳೆದ ಮೂರು ದಿನಗಳಿಂದ ಜರುಗಿದ ಕಾಡಿನ ಮಕ್ಕಳ ರೇಡಿಯೋ ಹಬ್ಬ ನಿನ್ನೆ ವರ್ಣರಂಜಿತ ತೆರೆ ಕಂಡಿತು. ಕೊಡಗು ಜಿಲ್ಲೆಯ ಆದಿವಾಸಿಗಳು ಹಾಗೂ ಮೂಲನಿವಾಸಿ ಜನಾಂಗಗಳ ಸಾಂಸ್ಕøತಿಕ ಕಲೆಗಳನ್ನು ಇಲ್ಲಿನ ಗಾಂಧಿ ಮೈದಾನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು. ಮಾತ್ರವಲ್ಲದೆ ದೇಶದ ಬೇರೆ ಬೇರೆ ರಾಜ್ಯಗಳಿಂದ ಆಗಮಿಸಿದ್ದ ಆದಿವಾಸಿಗಳು ತಮ್ಮ ಕಲೆಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಮನಸೂರೆಗೊಂಡರು.
ಮಡಿಕೇರಿ ಆಕಾಶವಾಣಿ ಕೇಂದ್ರ ಹಾಗೂ ತಂಜಾವೂರಿನ ಸಂಸ್ಥೆಯ ಸಹಯೋಗದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅನುದಾನದೊಂದಿಗೆ ಕಾಡಿನ ಮಕ್ಕಳ ರೇಡಿಯೋ ಹಬ್ಬ ಆಯೋಜನೆಗೊಂಡಿತ್ತು.ಸೋಮವಾರಪೇಟೆ, ಮಾ.20: ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು.
ಈ ಹಿಂದೆ ಆಸ್ಪತ್ರೆಯ ಸಮಸ್ಯೆಗಳನ್ನು ಬಗೆಹರಿಸಲು 15 ದಿನಗಳ ಗಡುವು ನೀಡಲಾಗಿದ್ದರೂ ಸಹ ಜನಪ್ರತಿನಿಧಿಗಳು ಹಾಗೂ ಆಡಳಿತ ವರ್ಗದಿಂದ ಯಾವದೇ ಸ್ಪಂದನ ದೊರಕದ ಹಿನ್ನೆಲೆ ಇಂದು ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಮಹಾತ್ಮಾ ಗಾಂಧಿ ಪ್ರತಿಮೆಯ ಎದುರು ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಭ್ರಷ್ಟವ್ಯವಸ್ಥೆಯನ್ನು ಸಾಂಕೇತಿಸುವ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಕಚೇರಿ ಮುಂಭಾಗ ಧರಣಿ ಕುಳಿತರು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವವರೆಗೂ ಪ್ರತಿಭಟನೆ ಹಿಂಪಡೆಯದಿರಲು ಕಾರ್ಯಕರ್ತರು ತೀರ್ಮಾನಿಸಿದರು.
ಸುಮಾರು 11.30ರಿಂದ ಕಚೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು ಮಧ್ಯಾಹ್ನದ ಊಟವನ್ನು ಕಚೇರಿಯ ಬಾಗಿಲ ಬಳಿಯಲ್ಲಿಯೇ ತಯಾರಿಸಿದರು. ವಿಷಯ ತಿಳಿದ ಡಿವೈಎಸ್‍ಪಿ ಸಂಪತ್‍ಕುಮಾರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತರ ಮನವೊಲಿಸಲು ಯತ್ನಿಸಿದರು. ಇದಕ್ಕೆ ಸ್ಪಂದಿಸದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಅಹವಾಲು ಆಲಿಸಬೇಕೆಂದು ಪಟ್ಟುಹಿಡಿದರು.
ಈ ಸಂದರ್ಭ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಕೆ.ಎನ್. ದೀಪಕ್, ಸೋಮವಾರಪೇಟೆ ಆಸ್ಪತ್ರೆಯ ಅವ್ಯವಸ್ಥೆಯಿಂದಾಗಿ ಜನ ಸಾಮಾನ್ಯರು ಪರದಾಟ ಅನುಭವಿಸು ತ್ತಿದ್ದಾರೆ. ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ದೂರಿದರು.
ಕರವೇ ನಗರಾಧ್ಯಕ್ಷ ಮಂಜುನಾಥ್ ಮಾತನಾಡಿ, ಆಸ್ಪತ್ರೆಗೆ ಹೆಚ್ಚಿನ ವೈದ್ಯ ಸಿಬ್ಬಂದಿ ನೇಮಿಸಲು ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ಉಪ ವಿಭಾಗಾಧಿಕಾರಿ ನಂಜುಂಡೇಗೌಡ ಅವರು, ಆಸ್ಪತ್ರೆಯ ಸಮಸ್ಯೆಯ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಪ್ರಾದಿಕಾರದ ಗಮನಸೆಳೆಯಲಾಗುವದು. ಸಮಸ್ಯೆ ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯ ಲಾಯಿತು.
ಪ್ರತಿಭಟನೆಯಲ್ಲಿ ಕರವೇ ಪದಾಧಿಕಾರಿಗಳಾದ ರವೀಶ್, ರೋಹಿತ್ ಗೌಡ, ಮಹಮ್ಮದ್ ಬೇಟು, ಚಂದ್ರ, ರೂಪಾ, ಜಗದೀಶ್, ಅಬ್ದುಲ್ ಸಲಾಂ, ಸತೀಶ್, ಬಬಿನ್ ಸೇರಿದಂತೆ ಇತರರು ಭಾಗವಹಿಸಿದ್ದರು.