ಮಡಿಕೇರಿ, ಮಾ. 20: ಕಸ ವಿಲೆÉೀವಾರಿ ಸೇರಿದಂತೆ ಅನೇಕ ಸಮಸ್ಯೆಗಳು ನರಿಯಂದಡ ಗ್ರಾಮ ಪಂಚಾಯ್ತಿಯನ್ನು ಕಾಡುತ್ತಿದ್ದು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಸದಸ್ಯರು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸದಸ್ಯ ಕೋಡಿರ ಪ್ರಸನ್ನ, ನರಿಯಂದಡ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ಮಿತಿ ಮೀರಿದ್ದು, ಎಲ್ಲೆÉಂದರಲ್ಲಿ ಕಸ ವಿಲೆÉೀವಾರಿಯಾಗುತ್ತಿರುವದರಿಂದ ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಲಕ್ಷಣದ ಭೀತಿ ಎದುರಾಗಿದೆಯೆಂದು ಆತಂಕ ವ್ಯಕ್ತಪಡಿಸಿದರು. ಕಸ ವಿಲೇವಾರಿಗೆ ಸೂಕ್ತ ಜಾಗ ಗುರುತಿಸಿಕೊಡಿ ಎಂದು ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆಗೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ಇಲ್ಲಿಯವರೆಗೆ ಯಾವದೇ ಸ್ಪಂದನ ದೊರಕಿಲ್ಲ. ಕಸ ವಿಲೇವಾರಿಗೆ ಗ್ರಾಮದಲ್ಲಿ ಸೂಕ್ತ ಸರ್ಕಾರಿ ಜಾಗ ಇದೆಯಾದರೂ ಇದನ್ನು ಗುರುತಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿಲ್ಲವೆಂದು ಆರೋಪಿಸಿದರು.
ತಕ್ಷಣ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿ ಜಾಗವನ್ನು ಗುರುತಿಸಿಕೊಡಬೇಕೆಂದು ಒತ್ತಾಯಿಸಿದರು. ಚೇಲಾವರ ಜಲಪಾತದ ವ್ಯಾಪ್ತಿಯಲ್ಲಿ ಪ್ರವಾಸಕ್ಕೆಂದು ಬಂದವರು ಸಾವನ್ನಪ್ಪುತ್ತಿರುವ ಪ್ರಕರಣಗಳು ಸಾಮಾನ್ಯವಾಗಿದೆ. ಇತ್ತೀಚೆಗೆ ಇಬ್ಬರು ಯುವಕರು ನೀರುಪಾಲಾದ ಸಂದರ್ಭ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಜಿಲ್ಲಾಧಿಕಾರಿಗಳು ನೀಡಿದ್ದರಾದರೂ ಇಲ್ಲಿಯವರೆಗೆ ಕಾಮಗಾರಿ ಆರಂಭಗೊಂಡಿಲ್ಲವೆಂದು ಆರೋಪಿಸಿದರು.
ಗ್ರಾಮದಲ್ಲಿ ಸ್ಮಶಾನದ ವ್ಯವಸ್ಥೆ ಇಲ್ಲದೆ, ಕರಡ ಹೊಳೆ ಬದಿಯಲ್ಲಿ ಶವ ಸಂಸ್ಕಾರ ಮಾಡಬೇಕಾದ ಅನಿವಾರ್ಯತೆ ಗ್ರಾಮಸ್ಥರಿಗೆ ಬಂದೊದಗಿದೆ. ಮಳೆಗಾಲದಲ್ಲಿ ಶವ ಸಂಸ್ಕಾರ ಮಾಡಿದ ತ್ಯಾಜ್ಯ ಹೊಳೆÉ ನೀರಿಗೆ ಸೇರುತ್ತಿದ್ದು, ಗ್ರಾಮಸ್ಥರಿಗೆ ಅದೇ ವ್ಯಾಪ್ತಿಯಿಂದ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಸ್ಮಶಾನಕ್ಕೂ ಸೂಕ್ತ ಜಾಗವನ್ನು ಗುರುತಿಸಬೇಕೆಂದು ಒತ್ತಾಯಿಸಿದರು.
ಕಡಂಗದಿಂದ ಎಡಪಾಲ, ಕೋಕೇರಿಯಿಂದ ಕೊಳಕೇರಿ ಹಾಗೂ ಚೆಯ್ಯಂಡಾಣೆಯಿಂದ ಪಾರಾಣೆÉಗೆ ಸಂಪರ್ಕ ಒದಗಿಸುವ ಜಿಲ್ಲಾ ಪಂಚಾಯ್ತಿ ರಸ್ತೆಗಳು ಸಂಪÀÇರ್ಣವಾಗಿ ಹದಗೆಟ್ಟಿದ್ದು ಮಳೆಗಾಲಕ್ಕೂ ಮೊದಲು ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಕೋಡೀರ ಪ್ರಸನ್ನ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಬೇಬಿ ಶಿವಪ್ಪ, ಉಪಾಧ್ಯಕ್ಷರಾದ ರವಿ ಸೋಮಣ್ಣ, ಸದಸ್ಯರುಗಳಾದ ಕೆ.ಜೆ. ಪ್ರಕಾಶ್ ಹಾಗೂ ಬಿ. ರತೀಶ್ ಕುಮಾರ್ ಉಪಸ್ಥಿತರಿದ್ದರು.