ಮಡಿಕೇರಿ, ಮಾ. 20: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಭಾರತ ಸ್ಕೌಟ್ಸ್ ಮತ್ತು ಗೈಡ್ ಕೊಡಗು ಜಿಲ್ಲಾ ಸಂಸ್ಥೆ ಮತ್ತು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ತಾ. 22 ರಂದು ಬೆಳಗ್ಗೆ 11 ಗಂಟೆಗೆ ನಗರದ ಜೂನಿಯರ್ ಕಾಲೇಜು ಆವರಣದ ಬಿ.ಆರ್.ಸಿ. ತರಬೇತಿ ಕೇಂದ್ರದ ಸಭಾಂಗಣದಲ್ಲಿ ವಿಶ್ವ ಜಲ ದಿನಾಚರಣೆ ನಡೆಯಲಿದೆ.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆÀ ಡಾ.ಜೆನಿಫರ್ ಲೋಲಿಟ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಚಿತ್ರ ವೈ., ಪರಿಸರಾಧಿಕಾರಿ ಜಿ.ಆರ್.ಗಣೇಶನ್, ಮಡಿಕೇರಿ ರೋಟರಿ ಕಾರ್ಯದರ್ಶಿ ಸಲೀಲಾ ಪಾಟ್ಕರ್, ಭಾ.ಸ್ಕೌ.ಗೈ. ಉಪಾಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು, ಭಾ.ಸ್ಕೌ.ಗೈ. ಜಿಲ್ಲಾ ಪ್ರಧಾನ ಆಯುಕ್ತ ಕೆ.ಬಿ.ಕಾಳಪ್ಪ, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಸುಕ್ರುದೇವೆಗೌಡ, ಭಾ.ಸ್ಕೌ.ಗೈ. ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರ ಇತರರು ಪಾಲ್ಗೊಳ್ಳಲಿದ್ದಾರೆ.