ಮಡಿಕೇರಿ, ಮಾ. 21: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೆÉೀತೃತ್ವದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿರುವದಾಗಿ ಪಕ್ಷದ ಪ್ರಬಾರ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯನ್ನು ನಡೆಸಲಾಗಿದ್ದು, ಪಕ್ಷದ ಬಲವರ್ಧನೆಗಾಗಿ ಬೂತ್ ಮಟ್ಟದಿಂದಲೆ ಚಟುವಟಿಕೆ ಚುರುಕುಗೊಳಿಸಲು ನಿರ್ಧರಿಸಲಾಗಿದೆ ಎಂದರು. 104 ಗ್ರಾ.ಪಂ, 3 ಪ.ಪಂ ಮತ್ತು ಮಡಿಕೆÉೀರಿ ನಗರಸಭಾ ವ್ಯಾಪ್ತಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೆÉೀತೃತ್ವದಲ್ಲಿ ಪ್ರವಾಸ ಕೈಗೊಳ್ಳಲಾಗುವದು. ಪಕ್ಷದ ಬಲವರ್ಧನೆಯ ಕಾರ್ಯಕ್ರಮಗಳಲ್ಲಿ ವಿಧಾನ ಪರಿಷತ್ತಿನ ಕಾಂಗ್ರೆಸ್ ಸದಸ್ಯರು, ನಿಗಮ ಮಂಡಳಿಗಳ ಪದಾಧಿಕಾರಿಗಳು ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್ ಅವರು ಅಭಿವೃದ್ಧಿ ಪರ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾಲ್ಕನೇ ಬಾರಿಗೆ ಮುಖ್ಯಮಂತ್ರಿಗಳು ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ರೂ. 200 ಕೋಟಿ ಬಿಡುಗಡೆ ಆದಂತಾಗಿದೆ ಎಂದರು.
ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಕೆ.ಎಂ. ಲೋಕೇಶ್ ಅವರನ್ನು ಈಗಾಗಲೇ ಅಮಾನತುಗೊಳಿಸಲಾಗಿದ್ದು, ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕೆಂದು ಕೆಪಿಸಿಸಿಗೆ ಮನವಿ ಸಲ್ಲಿಸಲು ಸಭೆ ನಿರ್ಣಯ ಕೈಗೊಂಡಿದೆÀ. ಡಾ. ಕಸ್ತೂರಿ ರಂಗನ್ ವರದಿ ಬಗ್ಗೆ 2014ರ ಮೇ 15 ರಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣೆಯನ್ನು ಸಲ್ಲಿಸಿದೆ. ಆದರೆ, ಮತ್ತೆ ಕೇಂದ್ರ ಸರ್ಕಾರ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಸೂಕ್ಷ್ಮ ಪರಿಸರ ವಲಯದ ಕುರಿತು ಅಂತಿಮ ತೀರ್ಮಾನವನ್ನು ಕೇಂದ್ರ ಸರ್ಕಾರವೆ ತೆಗೆದುಕೊಳ್ಳಬೇಕೆಂದು ತಿಳಿಸಿದ ರಮೇಶ್, ಜಿಲ್ಲೆಯಲ್ಲಿ ಗುರುತಿಸಲ್ಪಟ್ಟಿರುವ 55 ಗ್ರಾಮಗಳಲ್ಲಿ 40 ಗ್ರಾಮಗಳು ಜನವಸತಿಯಿಂದ ಕೂಡಿವೆ. ಕೇರಳದ ಮಾದರಿಯಲ್ಲಿ ಕೊಡಗಿಗೂ ರಿಯಾಯಿತಿ ನೀಡುವ ಮೂಲಕ ನ್ಯಾಯದೊರಕಿಸಬೇಕೆಂದು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವದೆಂದು ಹೇಳಿದರು.
ಪ್ರವಾಸೋದ್ಯಮದ ಬೆಳವಣಿಗೆಯ ದೃಷ್ಟಿಯಿಂದ ಜಿಲ್ಲೆಗೆ ಹಿರಿಯ ಪ್ರವಾಸೋದ್ಯಮ ಅಧಿಕಾರಿಯೊಬ್ಬರನ್ನು ನೇಮಿಸುವಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಅಕ್ರಮ ಸಕ್ರಮ ಸಮಿತಿಯ ಸಭೆಯನ್ನು ಶಾಸಕರು ನಡೆಸದೆ ಇರುವದರಿಂದ ತಹಶೀಲ್ದಾರರು ಅಗತ್ಯ ಕ್ರಮ ಕೈಗೊಳ್ಳಬಹುದಾದರು ಅಧಿಕಾರಿಗಳು ಯಾವದೇ ಪ್ರಕ್ರಿಯೆಯಲ್ಲಿ ತೊಡಗದೆ ಇರುವದರಿಂದ ಈ ಬಗ್ಗೆ ಉಸ್ತುವಾರಿ ಸಚಿವರ ಗಮನ ಸೆಳೆÉಯಲಾಗುವದು.
ಜಿಲ್ಲೆಯಲ್ಲಿ ಕೆಲವು ಅಧಿಕಾರಿಗಳು ಕರ್ತವ್ಯ ಲೋಪವೆಸಗುತ್ತಿದ್ದು, ಇವರುಗಳನ್ನು ಬದಲಾಯಿಸಿ ಕ್ರಿಯಾಶೀಲ ಅಧಿಕಾರಿಗಳನ್ನು ನೇಮಿಸುವಂತೆ ಉಸ್ತುವಾರಿ ಸಚಿವರಿಗೆ ಲಿಖಿತ ದೂರು ನೀಡಲಾಗುವದೆಂದರು.
ಗೋಣಿಕೊಪ್ಪಲು ಗ್ರಾ.ಪಂ.ಯಲ್ಲಿ 14 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು, ಕೇವಲ 7 ಸಂಖ್ಯಾ ಬಲ ಹೊಂದಿರುವ ಇತರ ಸದಸ್ಯರು ಕಾನೂನು ಉಲ್ಲಂಘಿಸಿ ಪಂಚಾಯಿತಿ ಕಟ್ಟಡ ಕೆಡವಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಬಹುಮತಕ್ಕೆ ಮಾನ್ಯತೆ ನೀಡದೆ ಏಕಪಕ್ಷೀಯವಾಗಿ ಕ್ರಮ ಕೈಗೊಂಡಿರುವ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವºಣಾಧಿಕಾರಿಗಳ ಗಮನ ಸೆಳೆÉಯಲಾಗವದೆಂದರು.
ನಗರಸಭೆÉ ಗೊಂದಲದ ಕುರಿತು ಮಾತನಾಡಿದ ಟಿ.ಪಿ. ರಮೇಶ್, ನಗರಸಭಾ ಕಾಂಗ್ರೆಸ್ ಸದಸ್ಯರ ಸಭೆ ಕರೆದು ಪಕ್ಷದಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ದೂರ ಮಾಡಲು ಪ್ರಯತ್ನಿಸುವದಾಗಿ ತಿಳಿಸಿದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಪುಷ್ಪಾವತಿ ಮಾತನಾಡಿ, ನಗರ ಸಭೆಯಲ್ಲಿ ಬಿಜೆಪಿ ಸದಸ್ಯರು ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ವಿರುದ್ಧ ಗೂಂಡಾವರ್ತನೆ ತೋರಿದ್ದಾರೆಂದು ಆರೋಪಿಸಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನ ಮಾತನಾಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನು ಟೀಕಿಸಿರುವ ಬಿಜೆಪಿಯ ಅಭಿಮನ್ಯುಕುಮಾರ್ ಅವರ ವರ್ತನೆ ಖಂಡನೀಯ ಎಂದರು.
ಜಿಲ್ಲಾ ಕಾರ್ಯದರ್ಶಿ ಬಿ.ಎನ್. ಪ್ರಕಾಶ್ ಮಾತನಾಡಿ, ಕಾಂಗ್ರೆಸ್ ಪಕ್ಷ ಅಭಿವೃದ್ಧಿಯ ಪರವಾಗಿದೆ. ಆದರೆ, ಗೋಣಿಕೊಪ್ಪಲಿನಲ್ಲಿ ನಡೆಸಿರುವ ಏಕಪಕ್ಷೀಯ ಕ್ರಮಗಳನ್ನು ಸಹಿಸಲು ಸಾಧ್ಯವಿಲ್ಲ. ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕೆಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್ ಹಾಗೂ ನಗರಾಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್ ಉಪಸ್ಥಿತರಿದ್ದರು.