ಮಡಿಕೇರಿ, ಮಾ. 21: ಇಂದು ಸದನದಲ್ಲಿ ಕೊಡಗು ಸೇರಿದಂತೆ ಮಲೆನಾಡು ಜಿಲ್ಲೆಗಳ ಸೂಕ್ಷ್ಮ ಪರಿಸರ ವಲಯದ ಕಸ್ತೂರಿ ರಂಗನ್ ವರದಿ ಕುರಿತು ಗಂಭೀರ ಚರ್ಚೆ ನಡೆಯಿತು. ರಾಜ್ಯ ಸರಕಾರವು ಈ ಬಗ್ಗೆ ಕೇಂದ್ರಕ್ಕೆ ಸಲ್ಲಿಸಿರುವ ಈ ಹಿಂದಿನ ವರದಿಯನ್ನು ಸದನದಲ್ಲಿ ಮಂಡಿಸಬೇಕೆಂದು ಶಾಸಕದ್ವಯರಾದ ಎಂ.ಪಿ. ಅಪ್ಪಚ್ಚು ರಂಜನ್ ಹಾಗೂ ಕೆ.ಜಿ. ಬೋಪಯ್ಯ ಆಗ್ರಹಿಸಿದರು.ಮಡಿಕೇರಿ, ಮಾ. 21: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ 2012-13 ರಿಂದ 2016-17ರ ವರೆಗಿನ ಅವಧಿಯಲ್ಲಿ ರಾಜ್ಯ ಸರಕಾರ ರೂ. 1155 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ ಅವರು ಉತ್ತರ ನೀಡಿದ್ದಾರೆ.

ವಿಧಾನ ಪರಿಷತ್‍ನಲ್ಲಿ ನಡೆದ ಕಲಾಪದ ವೇಳೆಯಲ್ಲಿ ಸದಸ್ಯೆ ಎಸ್. ವೀಣಾ ಅಚ್ಚಯ್ಯ ಅವರು ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಗುರುತಿಸಿರುವ ಪ್ರವಾಸಿ ತಾಣಗಳೆಷ್ಟು ಮತ್ತು 2012-13 ರಿಂದ ಸರಕಾರದಿಂದ ಬಿಡುಗಡೆ ಮಾಡಿರುವ ಅನುದಾನದ ಮಾಹಿತಿ ಬಗ್ಗೆ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ.

ಮಡಿಕೇರಿ, ಮಾ. 21: ಕೊಡಗು ಜಿಲ್ಲೆಯ ಏಕೈಕ ನಗರಸಭೆ ಸೇರಿದಂತೆ ಮೂರು ಪಟ್ಟಣ ಪಂಚಾಯಿತಿಗಳಲ್ಲಿ 51 ಹುದ್ದೆಗಳು ಖಾಲಿಯಿದೆ ಎಂದು ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಹಾಗೂ ಸಾರ್ವಜನಿಕ ಉದ್ದಿಮೆಗಳ ರಾಜ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಎಂಎಲ್ಸಿ ಎಂ.ಪಿ. ಸುನೀಲ್ ಸುಬ್ರಮಣಿ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಧಾನಮಂಡಲ ಅಧಿವೇಶನದಲ್ಲಿ ಮೇಲ್ಮನೆ ಸದಸ್ಯ ಎಂ.ಪಿ. ಸುನೀಲ್ ಸುಬ್ರಮಣಿ ಅವರು ಕೊಡಗು ಜಿಲ್ಲೆಯಲ್ಲಿನ ನಗರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿಯಿರುವ ಹುದ್ದೆಗಳೆಷ್ಟು ಮತ್ತು ಈ ಹುದ್ದೆಗಳನ್ನು ಭರ್ತಿ ಮಾಡಲು ಯಾವ ಕ್ರಮ ವಹಿಸಲಾಗಿದೆ ಎಂದು ಪ್ರಶ್ನಿಸಿದರು.

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕ್ರಮ

ಮಡಿಕೇರಿ ಮಾ.21 :ಕೊಡಗು ಜಿಲ್ಲೆಯಲ್ಲಿ 274 ಕಿ.ಮೀ. ಉದ್ದದ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆಗಳು ಅರಣ್ಯದ ಅಂಚಿನಲ್ಲಿರುವ ತೋಟಗಳಿಗೆ ನುಗ್ಗುವದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಅರಣ್ಯಾಧಿಕಾರಿಗಳು, ತಜ್ಞರು ಹಾಗೂ ನುರಿತ ಎಂಜಿನಿಯರ್‍ಗಳು ಸ್ಥಳ ಪರಿಶೀಲಿಸಿ ಅಧ್ಯಯನ ನಡೆಸಿ ಸ್ಥಳಗಳಿಗೆ ವಿಶೇಷ ವಿನ್ಯಾಸಗಳ ಕಾಮಗಾರಿಗಳನ್ನು ಕೈಗೊಳ್ಳುವದು ಅವಶ್ಯವಾಗಿದೆ ಎಂದು ತೀರ್ಮಾನಿಸಿ ವಿವರವಾದ ಯೋಜನಾ ವರದಿ ತಯಾರಿಸಲಾಗಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.