ವೀರಾಜಪೇಟೆ, ಮಾ. 22: ವೀರಾಜಪೇಟೆಯಲ್ಲಿರುವ ಕೊಡಗು ಮಹಿಳಾ ಸಮಾಜದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಹಿತಿ ನಾಯಕಂಡ ಬೇಬಿ ಚಿಣ್ಣಪ್ಪ, ದೈಹಿಕ ಶಿಕ್ಷಕಿ ನೆರವಂಡ ದೇಚಮ್ಮ, ರಾಷ್ಟ್ರೀಯ ಕ್ರೀಡಾಪಟು ಹಾಗೂ ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನ ವಿದ್ಯಾರ್ಥಿನಿ ಮುಲ್ಲೇರ ಪೊನ್ನಮ್ಮ ಇವರುಗಳನ್ನು ಸನ್ಮಾನಿಸಲಾಯಿತು.

ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಕುಸುಮಾ ಸೋಮಣ್ಣ ವಹಿಸಿ ಮಾತನಾಡಿದರು. ಆಟೋಟಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.