ಸುಂಟಿಕೊಪ್ಪ, ಮಾ. 22: ಮಹಿಳೆಯರು ಸ್ವಾವಲಂಬಿಯಾಗಿ ಬದಕನ್ನು ಕಟ್ಟಿಕೊಂಡು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಬಾರ ಉಪನಿರ್ದೇಶಕಿ ಮಮ್ತಾಜ್ ಹೇಳಿದರು.
ಕಂಬಿಬಾಣೆ ಗ್ರಾಮ ಪಂಚಾಯಿತಿಯ 2016-17ನೇ ಸಾಲಿನ ಮಹಿಳಾ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷ ಕೆ.ಬಿ. ಕೃಷ್ಣ ಅಧ್ಯಕ್ಷತೆಯಲ್ಲಿ ಅತ್ತೂರು-ನಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು. ಮಹಿಳೆಯರು ಸಶಕ್ತ ಬದುಕನ್ನು ಸಾಗಿಸಿದರೆ ಇಡೀ ಸಮಾಜದಲ್ಲಿ ಸ್ವಾಥ್ಯ ನೆಲೆಸಲಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕೆದಕಲ್ ಗ್ರಾ.ಪಂ. ಮಾಜಿ ಅಧ್ಯಕ್ಷೆ ಮಧು ನಾಗಪ್ಪ ನೆರವೇರಿಸಿದರು.
ಸೋಮವಾರಪೇಟೆ ತಾಲೂಕು ವೈದ್ಯಾಧಿಕಾರಿ ಪಾರ್ವತಿ ಮಾತನಾಡಿ, ಮಹಿಳೆಯರು ಮಕ್ಕಳ ಆರೋಗ್ಯದ ಕಡೆ ಹೆಚ್ಚಿಗೆ ಗಮನಹರಿಸಬೇಕು ಎಂದರು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಎಎಸ್ಐ ಹೆಚ್.ಟಿ. ಗೀತಾ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಶೋಷಣೆ ತಡೆಗಟ್ಟಲು ಇಲಾಖೆ ವತಿಯಿಂದ ತೆಗೆದು ಕೊಳ್ಳುತ್ತಿರುವ ಕ್ರಮದ ಬಗ್ಗೆ ಮಾಹಿತಿ ನೀಡಿದರು. ಸೋಮವಾರಪೇಟೆ ಶಿಶು ಅಭಿವೃದ್ಧಿ ಅಧಿಕಾರಿ ಸರಳಾಮಣಿ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಸಹಾಯಕಿಯರು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಭವಾನಿ, ಸದಸ್ಯರುಗಳಾದ ಮಂಜುಳ, ಮನುಕುಮಾರಿ, ಆಪ್ಸ ಉಪಸ್ಥಿತರಿದ್ದರು.
ಆಶಾ ಕಾರ್ಯಕರ್ತೆ ರೋಸ್ಸಿ ಪ್ರಾರ್ಥಿಸಿ, ಅಂಗನವಾಡಿ ಕಾರ್ಯಕರ್ತೆ ರತಿ ಸ್ವಾಗತಿಸಿ, ಕಂಬಿಬಾಣೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಸ್ಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.