ಕುಶಾಲನಗರ, ಮಾ. 22: ಮಹಿಳೆಯರು ಸರಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿ ಕೊಳ್ಳುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಬಾರ ನಿರ್ದೇಶಕಿ ಮುಮ್ತಾಜ್ ಕರೆ ನೀಡಿದ್ದಾರೆ.
ಪಟ್ಟಣದ ಎ.ಪಿ.ಸಿ.ಎಂ.ಎಸ್. ಸಭಾಂಗಣದಲ್ಲಿ ಸೋಮವಾರಪೇಟೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಹಾಗೂ ಕುಶಾಲನಗರದ ತ್ರಿವೇಣಿ ಸಂಗಮ ಸ್ತ್ರೀಶಕ್ತಿ ಹೋಬಳಿ ಗುಂಪು ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮುಖ್ಯ ಭಾಷಣಕಾರರಾಗಿ ಲೇಖಕಿ ನಯನತಾರ ಪ್ರಕಾಶ್‍ಚಂದ್ರ ಮಾತನಾಡಿ, ಹಲವಾರು ವರ್ಷಗಳ ಹಿಂದೆ ವಿವಿಧ ರೀತಿಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದವು. ಹೋರಾಟದ ಮೂಲಕ ಸ್ವಾವಲಂಬಿ ಬದುಕು ಸಾಗಿಸಲು ಇಂದು ಅವಕಾಶ ದೊರೆತಿದೆ ಎಂದರು. ವಿವಿಧ ಕ್ಷೇತ್ರಗಳಲ್ಲಿ ದುಡಿದ ಮಹಿಳೆಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಅಧ್ಯಕ್ಷತೆ ಯನ್ನು ಕುಶಾಲನಗರ ಹೋಬಳಿ ಒಕ್ಕೂಟದ ಅಧ್ಯಕ್ಷೆ ಹೆಚ್.ಎಂ. ಹೇಮ ವಹಿಸಿದ್ದರು. ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಮೇರಿ ಅಂಬುದಾಸ್, ಕಾರ್ಯದರ್ಶಿ ರೆಹನಾ ಸುಲ್ತಾನ್, ಪ್ರಮುಖರಾದ ಯಶೋದÀ, ಶೈಲಜಾ ಮುಂತಾದವರು ಇದ್ದರು.