ಕೂಡಿಗೆ, ಮಾ. 22: ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಲತಾ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಿತು. ಸಭೆಯಲ್ಲಿ ಮುಂದೆ ನಡೆಯುವ ಗ್ರಾಮ ಸಭೆಯಲ್ಲಿ ನಿವೇಶನ ರಹಿತ ಫಲಾನುಭವಿಗಳ ಆಯ್ಕೆಯ ಬಗ್ಗೆ ಚರ್ಚಿಸಲಾಯಿತು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶೇ.25ರ ಅನುದಾನವನ್ನು ಬಳಕೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು ಸದಸ್ಯರುಗಳಾದ ಮಧುಸೂಧನ್, ಶಿವನಂಜಪ್ಪ, ಚೇತನ್ ವಿವಿಧ ಸಲಹೆ-ಸೂಚನೆಗಳನ್ನು ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಮಾತನಾಡಿ, ಗ್ರಾಮ ಸಭೆಯಲ್ಲಿ ಚರ್ಚೆಗೆ ಬರುವ ವಿಷಯಗಳನ್ನು ಹೆಚ್ಚು ಗಮನವಿಟ್ಟು ಮಾಹಿತಿ ಸಂಗ್ರಹಿಸಿ ಅವುಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲಾ ಸದಸ್ಯರುಗಳು ಸಹಕರಿಸಬೇಕು ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ಮಾತನಾಡಿ, ಮುಂದಿನ ದಿನಗಳಲ್ಲಿ ಎಲ್ಲಾ ವಾರ್ಡುಗಳ ಸದಸ್ಯರುಗಳ ಸಲಹೆ-ಸೂಚನೆಗಳನ್ನು ಪಡೆದು ಗ್ರಾಮದ ಪ್ರಗತಿಗೆ ಪ್ರಯತ್ನಿಸಲಾಗುವದು ಎಂದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರೋಜಮ್ಮ, ಸದಸ್ಯರುಗಳಾದ ವೆಂಕಟೇಶ್, ದೇವಮ್ಮ, ಪ್ರಮೀಳ, ಪ್ರೇಮ, ಮಂಜುಳ ಇದ್ದರು.