ಶನಿವಾರಸಂತೆ, ಮಾ. 24: ಕೊಡ್ಲಿಪೇಟೆ ಗ್ರಾ.ಪಂ. ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ಅನುಸೂಯ ಹೇಮರಾಜ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂತೆ ಸುಂಕ, ಹಸಿಮೀನು, ಕೋಳಿ ಮಾಂಸ ಮತ್ತು ಹಂದಿ ಹಾಗೂ ಕುರಿ ಮಾಂಸ ಬಹಿರಂಗ ಹರಾಜು ಪ್ರಕ್ರಿಯೆ ಅರ್ಧಕ್ಕೆ ನಿಂತು ಹೋದ ಪ್ರಸಂಗ ನಡೆಯಿತು.
ಬಹಿರಂಗ ಹಾರಾಜಿನಲ್ಲಿ ಕೆಲವರಿಗೆ ಮಾತ್ರ ಭಾಗವಹಿಸಲು ಅವಕಾಶದೊಂದಿಗೆ ಟೆಂಡರ್ ಫಾರಂ ಶುಲ್ಕ ರೂ. 500 ಪಡೆದಿದ್ದು, ಇದಕ್ಕೆ ಕಾರಣವಾಯಿತು.
ಸಾರ್ವಜನಿಕರು ಪಂಚಾಯಿತಿಯ ಕಾರ್ಯವೈಖರಿಯನ್ನು ಖಂಡಿಸಿ ಪ್ರತಿಭಟಿಸಿದರು. ಹರಾಜು ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮಾಡುವಂತೆ ಆಗ್ರಹಿಸಿದರು.
ಜಯ ಕರ್ನಾಟಕ ಸಂಘಟನೆ ಹಾಗೂ ಇತರ ಪ್ರಮುಖರು ಸಭಾಂಗಣದೊಳಗಡೆ ಬಂದು ಪ್ರತಿಭಟಿಸಿದರು ಹಾಗೂ ಗ್ರಾಮ ಪಂಚಾಯಿತಿಯ ಆಡಳಿತದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ದಿನ ನಡೆದ ಹರಾಜು ರದ್ದುಪಡಿಸುವಂತೆ ಆಗ್ರಹಿಸಿದರು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದರು. ಹರಾಜು ಪ್ರಕ್ರಿಯೆ ಅರ್ಧಕ್ಕೆ ನಿಂತು ಹೋಯಿತು.