ಆಲೂರುಸಿದ್ಧಾಪುರ, ಮಾ. 23: ವಿಶ್ವ ಸಮಾಜ ಸೇವಾ ದಿನಾಚರಣೆ ಅಂಗವಾಗಿ ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ಜಿಲ್ಲಾಮಟ್ಟದ ಅಂತರ್ ಪದವಿ ಕಾಲೇಜುಗಳ ಪರಿಸರ ಜಾಗೃತಿ ನಾಟಕ ಸ್ಪರ್ಧೆಯಲ್ಲಿ ಕೊಡ್ಲಿಪೇಟೆ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿಗೆ ದ್ವಿತೀಯ ಸ್ಥಾನ ಲಭಿಸಿದೆ. ಸದರಿ ಕಾಲೇಜಿನ 8 ವಿದ್ಯಾರ್ಥಿಗಳು ಪರಿಸರ ಜಾಗೃತಿಯನ್ನು ಬಿಂಬಿಸುವಂತಹÀ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಜಿಲ್ಲೆಯ ವಿವಿಧ ಪದವಿ ಕಾಲೇಜುಗಳಿಂದ ಬಂದ ವಿದ್ಯಾರ್ಥಿಗಳು ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಕಾಲೇಜಿನ ವಿದ್ಯಾರ್ಥಿಗಳು ನಾಟಕ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆ ವತಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯವರು ಗೌರವಿಸಿದರು. ಈ ಸಂದರ್ಭ ವಿದ್ಯಾಸಂಸ್ಥೆ ಅಧ್ಯಕ್ಷ ಹೆಚ್.ಎಸ್. ಚಂದ್ರಮೌಳಿ, ನಿರ್ದೇಶಕ ಡಾ. ಉದಯ್‍ಕುಮಾರ್, ಎಸ್.ಎಸ್. ನಾಗರಾಜ್, ಕೆ.ಎಸ್. ಪರಮೇಶ್, ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್ ಇದ್ದರು