ಕೂಡಿಗೆ, ಮಾ. 23: ಸಮೀಪದ ಮಂಗಳೂರು ವಿಶ್ವವಿದ್ಯಾನಿಲಯ ಚಿಕ್ಕಅಳುವಾರ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ಅಧ್ಯಯನ ವಿಭಾಗದ ವತಿಯಿಂದ ವಿಶ್ವ ಸಮಾಜಕಾರ್ಯ ದಿನಾಚರಣೆ-2017 ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಮೈಸೂರು ಒಡನಾಡಿ ಸೇವಾ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರ ಸ್ಟ್ಯಾನ್ಲಿ ಪರಶು ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಶೈಕ್ಷಣಿಕ ವಿದ್ಯಾರ್ಹತೆ ಇದ್ದವರೆಲ್ಲಾ ಸಮಾಜ ಕಾರ್ಯ ವಿದ್ಯಾರ್ಥಿಗಳಾಗಲು ಸಾಧ್ಯವಿಲ್ಲ. ವಿದ್ಯಾರ್ಥಿಗಳಲ್ಲಿ ಬದಲಾವಣೆ ತಮ್ಮಿಂದಲೇ ಆಗುತ್ತದೆ ಎಂಬ ಭ್ರಮೆ ಬೇಡ. ಅನುಭವಿಗಳಿಂದ ಅವರ ಅನುಭವನಗಳನ್ನು ಪಡೆದು ಜನರ ನಡುವೆ ಒಡನಾಟಗಳನ್ನು ಬೆಳೆಸಿಕೊಂಡು ಸುತ್ತಮುತ್ತಲ ಪರಿಸರದಿಂದ ನಾವು ಕಲಿಯುವದು ತುಂಬಾ ಇದೆ. ಸ್ವಾರ್ಥವಿಲ್ಲದ ನಿಸ್ವಾರ್ಥ ಸೇವೆಯನ್ನು ಸಮಾಜದಲ್ಲಿ ಮಾಡಬೇಕು. ಸಮಾಜ ಸೇವೆ ಅಂತರಾಳದಿಂದ ಬರಬೇಕೆ ಹೊರತು ಪ್ರಚೋದನೆಯಿಂದಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಚಿಕ್ಕಅಳುವಾರ ಸ್ನಾತಕೋತ್ತರ ಕೇಂದ್ರದ ಪ್ರಬಾರ ನಿರ್ದೇಶಕ ಪ್ರೊ. ವಿ. ರವೀಂದ್ರಾಚಾರಿ ಮಾತನಾಡಿ, ಯುವಜನತೆ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮೈಸೂರು ಒಡನಾಡಿ ಸೇವಾ ಸಂಸ್ಥೆಯ ಪರಶುರಾಮ ಸೇರಿದಂತೆ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ನಾಯಕರು ಇದ್ದರು. ಈ ಸಂದರ್ಭ ಸುಂಟಿಕೊಪ್ಪ ಸ್ವಸ್ಥ ಸಂಸ್ಥೆಯ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.