ಸೋಮವಾರಪೇಟೆ, ಮಾ. 25: ಜಿಲ್ಲೆಯಲ್ಲಿ ನೇಕಾರರ ಒಕ್ಕೂಟವನ್ನು ಬಲಿಷ್ಠಗೊಳಿಸುವ ಮೂಲಕ ಸಂಘಟನೆಯನ್ನು ಇನ್ನಷ್ಟು ಸಮಾಜಮುಖಿಯಾಗಿಸಬೇಕೆಂದು ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷ ಪಾಂಡುರಂಗ ಹೇಳಿದರು.ಇಲ್ಲಿನ ಶ್ರೀರಾಮ ಮಂದಿರದಲ್ಲಿ ನಡೆದ ತಾಲೂಕು ನೇಕಾರರ ಒಕ್ಕೂಟದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಏಪ್ರಿಲ್ 13 ರಂದು ದೇವರ ದಾಸಿಮಯ್ಯ ಅವರ ಜನ್ಮದಿನವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವದು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ನೇಕಾರ ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಸಭೆಯ ಅಧ್ಯಕ್ಷತೆಯನ್ನು ನೇಕಾರರ ಒಕ್ಕೂಟದ ತಾಲೂಕು ಘಟಕದ ಅಧ್ಯಕ್ಷ ಸತಿನ್ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಸಮಿತಿಯ ಸದಸ್ಯ ಡಿ.ಟಿ. ತಿಮ್ಮಪ್ಪ, ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎಂ. ಚಂದ್ರಾಜು, ಪ್ರಧಾನ ಕಾರ್ಯದರ್ಶಿ ಪ್ರಸನ್ನ, ತಾಲೂಕು ಘಟಕದ ಕಾರ್ಯದರ್ಶಿ ರಾಮಶೆಟ್ಟಿ ಉಪಸ್ಥಿತರಿದ್ದರು.