ಮಡಿಕೇರಿ, ಮಾ.25 : ಪೊಲೀಸ್ ಸಬ್ ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿ ಸಂಬಂಧ 2015ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಕೊಡಗು ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಹಿಂತಿರುಗಿಸುವಂತೆ ಎ.ಡಿ.ಜಿ.ಪಿ. ಸೂಚಿಸಿದ್ದು, ಅದರಂತೆ ಹುದ್ದೆಗೆ ಕೊಡಗು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಹಿಂಪಡೆಯಲು ಭಾವಚಿತ್ರವಿರುವ ಗುರುತಿನ ಚೀಟಿ, ಅರ್ಜಿ ಶುಲ್ಕ ಪಾವತಿಸಿದ ಬಗ್ಗೆ ದಾಖಲಾತಿಯೊಂದಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು, ಕಚೇರಿಗೆ ಖುದ್ದು ಹಾಜರಾಗಿ ಅರ್ಜಿ ಶುಲ್ಕವನ್ನು ಪಡೆದುಕೊಳ್ಳುವಂತೆ ಪೊಲೀಸ್ ಅಧೀಕ್ಷಕರು ಸೂಚಿಸಿದ್ದಾರೆ.