ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವೀರಾಜಪೇಟೆ ಅನ್ವಾರುಲ್ ಹುದಾ ಸೆಂಟರ್ ಇವರ ಸಂಯುಕ್ತಾಶ್ರಯದಲ್ಲಿ ತಾ. 26ರಂದು (ಇಂದು) ಬೆಳಿಗ್ಗೆ 10.15 ಗಂಟೆಗೆ ವೀರಾಜಪೇಟೆ ಅನ್ವಾರುಲ್ ಹುದಾ ಸೆಂಟರ್‍ನಲ್ಲಿ ಶ್ರೀ ಎಸ್.ಎಸ್. ರಾಮಮೂರ್ತಿ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ವೀರಾಜಪೇಟೆ ತಾಲೂಕು ಕ.ಸಾ.ಪ. ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ, ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಲೋಕೇಶ್ ಸಾಗರ್ ಇತರರು ಪಾಲ್ಗೊಳ್ಳಲಿದ್ದಾರೆ.