ಮಡಿಕೇರಿ, ಮಾ. 25: ಕೊಡಗು ಗೌಡ ವಿದ್ಯಾಸಂಘದ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ತಾ. 26ರಂದು (ಇಂದು) ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 7.30 ರಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮಧ್ಯಾಹ್ನ 1.30ರವರೆಗೆ ನಡೆಯಲಿದೆ. ಒಟ್ಟು 15 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 4388 ಮಂದಿ ಸದಸ್ಯರಿರುವ ಸಂಘದಲ್ಲಿ 47 ಮಂದಿ ಸ್ಪರ್ಧಾಕಣದಲ್ಲಿದ್ದಾರೆ.