ಶ್ರೀಮಂಗಲ, ಮಾ. 25: ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ರೈತರ ಹೆಸರು ನೊಂದಾವಣಿ ಕಾರ್ಯಕ್ರಮ ತಾ. 27 (ನಾಳೆ) ಪೂರ್ವಾಹ್ನ 10 ಗಂಟೆಗೆ ಹುದಿಕೇರಿ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹುದಿಕೇರಿ ಕ್ಷೇತ್ರದ ಸದಸ್ಯ ಅಜ್ಜಿಕುಟ್ಟೀರ ಪ್ರವೀಣ್ ಮುತ್ತಪ್ಪ ವಹಿಸುವರು.
ಅತಿಥಿಗಳಾಗಿ ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸುವಿನ್ ಗಣಪತಿ, ಹುದಿಕೇರಿ ಗ್ರಾ.ಪಂ. ಅಧ್ಯಕ್ಷೆ ರೇಖಾ ಪೊನ್ನಪ್ಪ, ಶಾಸಕ ಕೆ.ಜಿ. ಬೋಪಯ್ಯ, ಜಿ.ಪಂ. ಸದಸ್ಯೆ ಶ್ರೀಜಾ ಸಾಜಿ, ತಾ.ಪಂ. ಉಪಾಧ್ಯಕ್ಷ ಚಲನ್ ಕುಮಾರ್, ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯ ಅಜ್ಜಿಕುಟ್ಟೀರ ನರೇನ್ ಕಾರ್ಯಪ್ಪ, ಹುದಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೋದಂಡ ಸಿ. ಉತ್ತಪ್ಪ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಬರುವ ರೈತರು ತಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯ ಪಾಸ್ ಪುಸ್ತಕ ಅಗತ್ಯ ದಾಖಲಾತಿಗಾಗಿ ತರಬೇಕೆಂದು ಪ್ರಕಟಣೆ ತಿಳಿಸಿದೆ.