ಕುಶಾಲನಗರ, ಮಾ. 27: ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಯೋಗದೊಂದಿಗೆ ನಿರ್ಮಾಣಗೊಂಡಿರುವ ಸುವರ್ಣ ಭವನ ಕಟ್ಟಡದ ಉದ್ಘಾಟನಾ ಸಮಾರಂಭ ಏಪ್ರಿಲ್ 2 ರಂದು ನಡೆಯಲಿದೆ. ವಿಧಾನ ಪರಿಷತ್ ಸಭಾಪತಿಗಳಾದ ಡಿ.ಹೆಚ್.ಶಂಕರಮೂರ್ತಿ ಸುವರ್ಣ ಭವನ ಉದ್ಘಾಟನೆ ನೆರವೇರಿಸುವರು. ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಹೆಚ್.ಯು.ತಳವಾರ್ ಅವರು ಕಾವೇರಿ ವೇದಿಕೆಗೆ ಚಾಲನೆ ನೀಡಲಿದ್ದಾರೆ.