ಮಡಿಕೇರಿ, ಏ. 6: ಜಿಲ್ಲಾ ಕೇಂದ್ರ ಮಡಿಕೆÉೀರಿಯಲ್ಲಿ ತಾ. 13 ರಂದು ಆಯೋಜಿತ ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ ನೆಲೆಸಿರುವ ಎಲ್ಲಾ ನೇಕಾರ ಸಮುದಾಯ ಬಾಂಧವರು ಪಾಲ್ಗೊಳ್ಳುವಂತೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಟಿ.ಕೆ. ಪಾಂಡುರಂಗ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾಸಿಮಯ್ಯ ಅವರ ಜಯಂತಿಯನ್ನು ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಆಚರಿಸಲು ಕೇಂದ್ರ್ರ ಸಮಿತಿ ಆದೇಶಿಸಿದೆ. ಆದರೆ, ಜಿಲ್ಲೆಯಲ್ಲಿ ಎಲ್ಲಾ ನೇಕಾರ ಬಂಧುಗಳು ಒಂದೆಡೆ ಸೇರಿ ದಾಸಿಮಯ್ಯನವರ ಜಯಂತಿ ಆಚರಿಸಲು ನಿರ್ಧರಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಸೂಚಿತ ದಿನದಂದು ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೇಕಾರ ಸಮುದಾಯ ಬಾಂಧವರು ಪಾಲ್ಗೊಳ್ಳುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು, ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖಾ ಅಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ನೇಕಾರ ಸಮುದಾಯ ಒಕ್ಕೂಟಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆಂದು ಮಾಹಿತಿ ನೀಡಿದರು.
ಮೂಲ ಸೌಲಭ್ಯ
ಜಿಲ್ಲಾ ವ್ಯಾಪ್ತಿಯಲ್ಲಿ 4 ರಿಂದ 5 ಸಾವಿರದಷ್ಟು ನೇಕಾರ ಸಮುದಾಯ ಬಾಂಧವರು ನೆಲೆಸಿದ್ದಾರೆ. ಶಿರಂಗಾಲದಲ್ಲಿರುವ ಕೈಮಗ್ಗ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಸ್ಥಳೀಯ ನೇಕಾರರು ತಯಾರಿಸುವ ಉತ್ಪನ್ನಗಳನ್ನು ಜಿಲ್ಲೆಯ ಸರ್ಕಾರಿ ಇಲಾಖೆಗಳು ಖರೀದಿಸುವಂತೆ ಅಧಿಕಾರಿ ವರ್ಗಕ್ಕೆ ಮಾಡಿಕೊಂಡ ಮನವಿಗಳಿಗೆ ಇಲ್ಲಿಯವರೆಗೂ ಸೂಕ್ತ ಸ್ಪಂದನ ದೊರಕಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಸದಸ್ಯರಾದ ಡಿ.ಕೆ. ತಿಮ್ಮಪ್ಪ ಮಾತನಾಡಿ, ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ನೇಕಾರ ಸಮುದಾಯ ಬಾಂಧವರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ನೇಕಾರ ಸಮುದಾಯ ಒಕ್ಕೂಟಗಳ ಮಡಿಕೆÉೀರಿ ತಾಲೂಕು ಅಧ್ಯಕ್ಷ ಡಿ.ಡಿ. ರಮೇಶ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸತ್ಯ, ವಾಸುದೇವ್ ಹಾಗೂ ಒಕ್ಕೂಟದ ವಕ್ತಾರ ನಾಗರಾಜಶೆಟ್ಟಿ ಉಪಸ್ಥಿತರಿದ್ದರು.