ಮಡಿಕೇರಿ, ಏ.14: ರಾಜ್ಯ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ತಾ. 15 ಮತ್ತು 16 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ತಾ. 15 ರಂದು ಬೆಳಗ್ಗೆ 11 ಗಂಟೆಗೆ ದಿಡ್ಡಳ್ಳಿಗೆ ಭೇಟಿ ನೀಡಿ ನಿರಾಶ್ರಿತರ ಜೊತೆ ಚರ್ಚೆ ಮತ್ತು ಅರಣ್ಯ ಹಕ್ಕು ಹಾಗೂ ಸಮುದಾಯಗಳ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ. ನಂತರ 3.45 ಗಂಟೆಗೆ ವೀರಾಜಪೇಟೆ ತಾಲೂಕು ಕೆದಮುಳ್ಳೂರಿಗೆ ತೆರಳಲಿದ್ದಾರೆ.

ತಾ. 16 ರಂದು ಬೆಳಗ್ಗೆ 10 ಗಂಟೆಗೆ ಬಸವನಹಳ್ಳಿಗೆ ತೆರಳಿ ನಿರಾಶ್ರಿತರಿಗೆ ನಿವೇಶನ ಹಂಚಲು ಗುರುತಿಸಿದ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಹಾಗೆಯೇ ಅರಣ್ಯ ಹಕ್ಕು ಮತ್ತು ಸಮುದಾಯ ಹಕ್ಕುಗಳ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ. ಬೆಳಗ್ಗೆ 11.30 ಗಂಟೆಗೆ ಬ್ಯಾಡಗೊಟ್ಟ ಗ್ರಾಮ (ಮದಲಾಪುರ) ಭೇಟಿ ನೀಡಿ ನಿರಾಶ್ರಿತರಿಗೆ ನಿವೇಶನ ಹಂಚಲು ಗುರುತಿಸಿದ ಸ್ಥಳ ಪರಿಶೀಲನೆ ಮಾಡಲಿದ್ದಾರೆ ಎಂದು ಕಂದಾಯ ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

ಅರಣ್ಯ ಸಚಿವರ ಪ್ರವಾಸ ಕಾರ್ಯಕ್ರಮ

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಅವರು ತಾ. 15 ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ತಾ. 15 ರಂದು (ಇಂದು) ಬೆಳಗ್ಗೆ 11 ಗಂಟೆಗೆ ಕಂದಾಯ ಸಚಿವರ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.