ಸೋಮವಾರಪೇಟೆ, ಏ. 16: ಸಮೀಪದ ಹಾನಗಲ್ಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಆರೋಗ್ಯ ದಿನವನ್ನು ಆಚರಿಸ ಲಾಯಿತು. ಜಿ.ಪಂ. ಸದಸ್ಯ ಬಿ.ಜೆ. ದೀಪಕ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾನವ ತನ್ನ ಆರೋಗ್ಯದೊಂದಿಗೆ ಪರಿಸರವನ್ನು ಕಾಪಾಡಿಕೊಳ್ಳಬೇಕು. ಪ್ರಕೃತಿಯನ್ನು ರಕ್ಷಿಸುವ ಮೂಲಕ ಮಾನವ ಕುಲವನ್ನು ಉಳಿಸಬೇಕು ಎಂದು ಅಭಿಪ್ರಾಯಿ ಸಿದರು. ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ರೇಣುಕಾ ವೆಂಕಟೇಶ್ ವಹಿಸಿದ್ದರು. ವೇದಿಕೆಯಲ್ಲಿ ತಾ.ಪಂ. ಸದಸ್ಯೆ ತಂಗಮ್ಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಮೇಲ್ವಿಚಾರಕಿ ಶೈಲಾ ಉಪಸ್ಥಿತರಿದ್ದರು.