ವೀರಾಜಪೇಟೆ, ಏ. 16: ಸವಿತಾ ಸಮಾಜದ ವೀರಾಜಪೇಟೆ ನಗರ ಘಟಕದ ವತಿಯಿಂದ ಸಮುದಾಯ ಬಾಂಧವರಿಗೆ ಮೇ 8 ಹಾಗೂ 9 ರಂದು ಜಿಲ್ಲಾ ಮಟ್ಟದ ಸೂಪರ್ ನೈನ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿದೆ ಎಂದು ನಗರ ಸಮಿತಿ ಅಧ್ಯಕ್ಷ ಕೆ.ಟಿ. ವೆಂಕಟೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಟೂರ್ನಿಯನ್ನು ಆಯೋಜಿಸಲಾಗಿದೆ. ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ ಹಾಗೂ ರೂ. 10 ಸಾವಿರ ನಗದು, ದ್ವಿತೀಯ ಆಕರ್ಷಕ ಟ್ರೋಫಿ ಹಾಗೂ ರೂ. 5 ಸಾವಿರ ನಗದು ಬಹುಮಾನ, ಜೊತೆಗೆ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುವದು. ತಂಡಗಳ ನೋಂದಣಿಗಾಗಿ ತಾ. 30 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9482943789 ಹಾಗೂ 9741936164 ಸಂಪರ್ಕಿಸುವಂತೆ ಕೋರಿದ್ದಾರೆ.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಪಿ. ರಾಜ, ಪ್ರಧಾನ ಕಾರ್ಯದರ್ಶಿ ಈಶ್ವರ್, ಸಹ ಕಾರ್ಯದರ್ಶಿ ಅನಿಲ್, ಖಜಾಂಚಿ ಸುಭಾಶ್ ಮತ್ತಿತರರು ಉಪಸ್ಥಿತರಿದ್ದರು.