ಸೋಮವಾರಪೇಟೆ, ಏ. 16: ತಾಲೂಕಿನ ಶಾಂತಳ್ಳಿ ಹೋಬಳಿಯ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಸಮಿತಿ ವತಿಯಿಂದ ತಾ. 18 ರಂದು ತೋಳೂರು ಶೆಟ್ಟಳ್ಳಿಯ ಅಂಬೇಡ್ಕರ್ ನಗರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಕ್ರೀಡಾಕೂಟ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷÀ ಎಸ್.ಬಿ. ವಿಜಯಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿತಿ ವತಿಯಿಂದ ಪ್ರತಿ ವರ್ಷ ಅಂಬೇಡ್ಕರ್ ದಿನಾಚರಣೆ ಪ್ರಯುಕ್ತ ವಿವಿಧ ಕ್ರೀಡಾಕೂಟಗಳು ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.
ತಾ. 18 ರಂದು ಬೆಳಿಗ್ಗೆ 10 ಗಂಟೆಗೆ ಸೋಮವಾರಪೇಟೆಯ ಬಾಣವಾರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ತೋಳೂರು ಶೆಟ್ಟಳ್ಳಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ಡಾ. ದೇವದಾಸ್ ಉದ್ಘಾಟಿಸಲಿದ್ದಾರೆ. ಭಾಷಣಕಾರರಾಗಿ ಜಿಲ್ಲಾಸ್ಪತ್ರೆಯ ಡಾ. ಸತೀಶ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಅಪ್ಪಚ್ಚು ರಂಜನ್, ಮಾಜಿ ಸಚಿವ ಬಿ.ಎ. ಜೀವಿಜಯ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯ ಬಿ.ಜೆ. ದೀಪಕ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಸೇರಿದಂತೆ ಇತರರು ಪಾಲ್ಗೊಳ್ಳಲಿ ದ್ದಾರೆ ಎಂದು ತಿಳಿಸಿದರು.
ಸಂಜೆ 4 ಗಂಟೆಗೆ ನಡೆಯ ಲಿರುವ ಕ್ರೀಡಾಕೂಟವನ್ನು ಗಡಿಭದ್ರತಾ ಪಡೆಯ ಯೋಧ ಸತೀಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರವೀಂದ್ರ, ಅರುಣ್ ಕಾಳಪ್ಪ, ಐ.ಎನ್.ಟಿ.ಯು.ಸಿ. ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು. ಇದೇ ಸಂದರ್ಭ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬಡ್ಡಿ, ಮಹಿಳೆಯರ ಹಗ್ಗಜಗ್ಗಾಟ, ಪುರುಷರು, ಮಹಿಳೆಯರು ಮತ್ತು ಮಕ್ಕಳಿಗೆ ವಿವಿಧ ಮನೋರಂಜನಾ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಮಾಜಿ ಗೌರವಾಧ್ಯಕ್ಷ ಟಿ.ಈ. ಸುರೇಶ್, ಸಮಿತಿಯ ಪದಾಧಿಕಾರಿಗಳಾದ ಎಸ್.ಪಿ. ಪ್ರತಾಪ್, ಯೋಗೇಶ್, ಎಸ್.ಪಿ. ಬಸಪ್ಪ ಮತ್ತಿತರರು ಉಪಸ್ಥಿತರಿದ್ದರು.