ಕುಶಾಲನಗರ: ಡಾ. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಅಂಗವಾಗಿ ಕುಶಾಲನಗರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಪೌರ ಕಾರ್ಮಿಕರಾದ ಗೌರಮ್ಮ ಮತ್ತು ಗಣೇಶ್ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಪ.ಪಂ. ಅಧ್ಯಕ್ಷರಾದ ಎಂ.ಎಂ. ಚರಣ್ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಟಿ.ಆರ್. ಶರವಣಕುಮಾರ್, ಸದಸ್ಯರಾದ ಹೆಚ್.ಜೆ. ಕರಿಯಪ್ಪ, ಹೆಚ್.ಡಿ. ಚಂದ್ರು, ಪಾರ್ವತಿ, ರಶ್ಮಿ ಅಮೃತರಾಜ್, ರೇಣುಕಾ, ಕವಿತಾ ಮಂಜು, ನಂಜುಂಡಸ್ವಾಮಿ, ಡಿ.ಕೆ. ತಿಮ್ಮಪ್ಪ, ಮುಖ್ಯಾಧಿಕಾರಿ ಶ್ರೀಧರ್ ಮತ್ತಿತರರು ಇದ್ದರು.