ಸೋಮವಾರಪೇಟೆ, ಏ. 19: ತಾಲೂಕಿನ ಶಾಂತಳ್ಳಿ ಹೋಬಳಿಯ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.

ಬಾಣಾವರ ರಸ್ತೆಯಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ದಲಿತ ಮುಖಂಡರು ಮಾಲಾರ್ಪಣೆ ಮಾಡಿದರು. ನಂತರ ನೂರಾರು ಮಂದಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ತೋಳೂರುಶೆಟ್ಟಳ್ಳಿಯ ಅಂಬೇಡ್ಕರ್ ನಗರದಲ್ಲಿ ನಡೆದ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ದೇವದಾಸ್ ಉದ್ಘಾಟಿಸಿದರು. ವೇದಿಕೆಯಲ್ಲಿ ಜನ್ಮ ದಿನಾಚರಣೆ ಸಮಿತಿ ಅಧ್ಯಕ್ಷ ಎಸ್.ಬಿ. ವಿಜಯಕುಮಾರ್, ಶಾಸಕ ಎಂಪಿ. ಅಪ್ಪಚ್ಚು ರಂಜನ್, ಮಾಜಿ ಸಚಿವ ಬಿ.ಎ.ಜೀವಿಜಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ವೈದ್ಯಾಧಿಕಾರಿ ಡಾ. ಸತೀಶ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯ ಬಿ.ಜೆ. ದೀಪಕ್, ಪ್ರಮುಖರಾದ ಟಿ.ಈ. ಸುರೇಶ್, ಎಸ್.ಪಿ. ಪ್ರತಾಪ್, ಯೋಗೇಶ್, ಎಸ್.ಪಿ. ಬಸಪ್ಪ, ಬಿ.ಬಿ.ಆನಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.