*ಗೋಣಿಕೊಪ್ಪ, ಏ. 18: ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವನ್ನು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿತು.
ವಲಯ ಕಾಂಗ್ರೆಸ್ ಅಧ್ಯಕ್ಷ ಮತ್ರಂಡ ದಿಲ್ಲು ಮಾತನಾಡಿ, ಬಿ.ಜೆ.ಪಿ.ಯ 2018ರಲ್ಲಿ ನಡೆಯುವ ಚುನಾವಣೆಯ ಭವಿಷ್ಯವನ್ನು ಈ ಕ್ಷೇತ್ರದ ಕಾಂಗ್ರೆಸ್ ಗೆಲುವಿನಿಂದ ತೋರಿಸಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಬಡವರ ಅಭಿವೃದ್ಧಿಗೆ ಶ್ರಮಿಸಲಿದೆ. ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಹೇಳಿದರು. ವಿಜಯೋತ್ಸವದಲ್ಲಿ ಜಿ.ಪಂ. ಸದಸ್ಯೆ ಶ್ರೀಜಾ ಸಾಜಿ, ತಾ.ಪಂ. ಸದಸ್ಯೆ ಆಶಾ ಪೂಣಚ್ಚ, ಗ್ರಾ.ಪಂ. ಅಧ್ಯಕ್ಷೆ ಸುಮಿತಾ, ಹಿಂದುಳಿದ ವರ್ಗದ ಅಧ್ಯಕ್ಷ ಸರಾ ಚಂಗಪ್ಪ, ಜಿ.ಪಂ. ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ, ತಾ.ಪಂ. ಮಾಜಿ ಸದಸ್ಯೆ ಸಾಜಿ ಅಚ್ಯುತ್ತನ್ ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.