ಮಡಿಕೇರಿ, ಏ. 18: ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ತಾ. 20 ರಂದು ಬೆಳಿಗ್ಗೆ 10 ಗಂಟೆಯಿಂದ 11.30 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯು ಜರುಗಲಿರುವದು. ನಂತರ 11-30 ರಿಂದ 12ರ ವರೆಗೆ ಸಾರಿಗೆ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಯಲಿದ್ದು, ಸಾರ್ವಜನಿಕರ ಅಹವಾಲು ಆಲಿಸಲಾಗುತ್ತದೆ. ಮಧ್ಯಾಹ್ನ 12 ರಿಂದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯು ಜರುಗಲಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತು ಕಾರ್ಯದರ್ಶಿ ತಿಳಿಸಿದ್ದಾರೆ.