ಮಡಿಕೇರಿ, ಏ. 19: ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಸ್ಥಾನಕ್ಕೆ, ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸ್ಥಾನಕ್ಕೆ ಮತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ತಾ. 21 ರಂದು ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ನಾಮಪತ್ರವನ್ನು ಚುನಾವಣಾಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಂದು ಸಲ್ಲಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಎಂ. ರಾಜು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸುವವರು ಯಾವದಾದರೂ ಒಂದು ಅಧಿಕೃತ ಗುರುತಿನ ಚೀಟಿ ತರತಕ್ಕದ್ದು, ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಸಂಪರ್ಕಿಸಬಹುದು. ಮೇ 9 ರಿಂದ 12 ರೊಳಗೆ ಚುನಾವಣೆ ನಡೆಯುವ ಸ್ಥಳ ಗೊತ್ತುಪಡಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗುವದೆಂದು ಚುನಾವಣಾ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.