ಮಡಿಕೇರಿ, ಮೇ 4: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ನೌಕರರ ಸಂಘದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜಯಂತಿಯನ್ನು ಮಡಿಕೇರಿಯ ಸರಕಾರಿ ಬಸ್ ನಿಲ್ದಾಣದಲ್ಲಿ ತಾ. 5 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಘದ ರಾಜ್ಯಾಧ್ಯಕ್ಷ ಎಫ್.ಹೆಚ್. ಜಕ್ಕಪ್ಪ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಲ್. ನಾಗರಾಜು ಶಿವಾಳಿ ಅಧ್ಯಕ್ಷತೆ ವಹಿಸಲಿದ್ದಾರೆ.