ಕುಶಾಲನಗರ, ಮೇ 17: ಕೊಡಗು ಜಿಲ್ಲೆಯನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದು ತಂಬಾಕು ನಿಯಂತ್ರಣದ ಹೈಪವರ್ ಮಂಡಳಿ ಅಧಿಕಾರಿ ಜಾನ್ ಕೆನಾಡಿಯ ತಿಳಿಸಿದ್ದಾರೆ. ಅವರು ಕುಶಾಲನಗರದ ಪೊಲೀಸ್ ವಸತಿಗೃಹದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದರು. ಕಾನೂನು ಬಾಹಿರವಾಗಿ ಸಿಗರೇಟ್, ಬೀಡಿ, ಪಾನ್ ಪರಾಗ್ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಬಹಿರಂಗವಾಗಿ ಮಾರಾಟ ಮಾಡುವುದು ನಿಯಮಬಾಹಿg Àವಾಗಿದೆ. ಈ ನಿಟ್ಟಿನಲ್ಲಿ ವರ್ತಕರಿಗೆ ಮತ್ತು ಕಛೇರಿಗಳಲ್ಲಿ ಅಧಿಕಾರಿಗಳಿಗೆ ಸಮರ್ಪಕ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ದಾಳಿ ಮಾಡುವದರೊಂದಿಗೆ ಅಕ್ರಮ ದಾಸ್ತಾನುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುವದು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಬಳಕೆ ಕಟ್ಟುನಿಟ್ಟಾಗಿ ನಿರ್ಭಂದಿಸಲಾಗಿದೆ. ಈ ಸಂಬಂಧ ಕೊಡಗು ಜಿಲ್ಲೆಯ 3 ತಾಲೂಕುಗಳಲ್ಲಿ ಹಲವು ತಂಡಗಳು ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಮಾತನಾಡಿದ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಸಂಪತ್‍ಕುಮಾರ್, ಸ್ಥಳೀಯ ಆಡಳಿತ ಸಂಸ್ಥೆಗಳು ಈ ಬಗ್ಗೆ ಅರಿವು ಜಾಗೃತಿ ಮೂಡಿಸುವದರೊಂದಿಗೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ. ಶಿವಕುಮಾರ್, ವೃತ್ತ ನಿರೀಕ್ಷಕ ಕ್ಯಾತೆಗೌಡ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.