ಕುಶಾಲನಗರ, ಜೂ. 5: ಬ್ಯಾಡಗೊಟ್ಟ ನಿರಾಶ್ರಿತರ ಜಾಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಮಣಿವಣ್ಣನ್ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ವಾಸ್ತವ್ಯ ಹೂಡಿದ್ದು, ಅಲ್ಲಿನ ನಿರಾಶ್ರಿತರ ಸಮಸ್ಯೆಗಳನ್ನು ಖುದ್ದು ಆಲಿಸಲಿದ್ದಾರೆ.ಇಂದು ಜಿಲ್ಲೆಗೆ ಭೇಟಿ ನೀಡಿದ ಆಯುಕ್ತರು ಬಸವನಹಳ್ಳಿ ನಿರಾಶ್ರಿತರ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳು ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು. ಬಳಿಕ ಅಲ್ಲಿಂದ ಬ್ಯಾಡಗೊಟ್ಟಕ್ಕೆ ಆಗಮಿಸಿದ ಆಯುಕ್ತರು ಬ್ಯಾಡಗೊಟ್ಟದಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಆಯುಕ್ತರೊಂದಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಾರುಲತಾ ಸೋಮಲ್ ಹಾಗೂ ಇತರ ಅಧಿಕಾರಿ ಗಳು ಕೂಡ ವಾಸ್ತವ್ಯ ಹೂಡಿದ್ದಾರೆ.